Select Your Language

Notifications

webdunia
webdunia
webdunia
webdunia

ಬಿಲ್ವಪ್ರಿಯ ಪರಶಿವನಿಗೆ ಜಾಗರಣೆ ಪೂಜೆ - ಶಿವರಾತ್ರಿ

ಬಿಲ್ವಪ್ರಿಯ ಪರಶಿವನಿಗೆ ಜಾಗರಣೆ ಪೂಜೆ - ಶಿವರಾತ್ರಿ
, ಬುಧವಾರ, 26 ಫೆಬ್ರವರಿ 2014 (09:40 IST)
PR
ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಆಚರಿಸಲಾಗುತ್ತದೆ. ಈ ಬಾರಿ ಇದರ ಆಚರಣೆ ಫೆಬ್ರುವರಿ 27 ರಂದು.

ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ನಾಲ್ಕು ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಶಿವನಿಗೆ ಬಿಲ್ವ ಪತ್ರೆಗಳನ್ನು ಅರ್ಪಿಸಿ ಪೂಜೆ ಸಲ್ಲಿಸುತ್ತಾರೆ. ಉತ್ತರ ಭಾರತ ಹಾಗೂ ನೇಪಾಳದಲ್ಲಿ ಶಿವನ ಆರಾಧಕರು ಭಂಗ ಮತ್ತು ಲಸ್ಸಿಯನ್ನು ಕುಡಿಯುತ್ತಾರೆ (ಮಹಾರಾಷ್ಟ್ರದಲ್ಲಿ ಇದನ್ನು ಕಡ್ಡಾಯವಾಗಿ ಕುಡಿದು ಹಬ್ಬವನ್ನು ಆಚರಿಸುತ್ತಾರೆ, ಇದು ಅಮಲು ಪದಾರ್ಥವಾಗಿದೆ) ಇದು ಶಿವನಿಗೆ ತುಂಬಾ ಪ್ರೀತಿಯೆಂದು ಹೇಳುತ್ತಾರೆ. ಮಹಾಶಿವರಾತ್ರಿ ಹಬ್ಬದ ಆಚರಣೆ ಕುರಿತಂತೆ ಅನೇಕ ದಂತಕಥೆಗಳನ್ನು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.

Share this Story:

Follow Webdunia kannada