Select Your Language

Notifications

webdunia
webdunia
webdunia
webdunia

ದೀಪಿಕಾ ಪಡುಕೋಣೆ ವಾಸವಿದ್ದ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ

ದೀಪಿಕಾ ಪಡುಕೋಣೆ ವಾಸವಿದ್ದ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ
ಮುಂಬೈ , ಗುರುವಾರ, 14 ಜೂನ್ 2018 (06:39 IST)
ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ವಾಸವಿದ್ದ ಮುಂಬೈನ ವರ್ಲಿಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ  ಸಂಭವಿಸಿರುವುದಾಗಿ ತಿಳಿದುಬಂದಿದೆ.


ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, 33ನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಆಪಾರ್ಟ್ ಮೆಂಟ್ ನಲ್ಲಿ 90ಕ್ಕೂ ಹೆಚ್ಚು ನಿವಾಸಿಗಳು ವಾಸಿಸುತ್ತಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ತಕ್ಷಣ ಸ್ಥಳಕ್ಕೆ ಅಗ್ನಿ ಶ್ಯಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದು, ಒಟ್ಟು 6 ಅಗ್ನಿಶ್ಯಾಮಕ ವಾಹನಗಳು ಕಾರ್ಯಾಚರಣೆ ನಡೆಸಿದ್ದಾರೆ. ಆದರೂ ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಟ್ಟಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿದ ಕಿಡಿಗೇಡಿಗಳಿಗೆ ದರ್ಶನ್ ಖಡಕ್ ವಾರ್ನಿಂಗ್