Select Your Language

Notifications

webdunia
webdunia
webdunia
webdunia

ಮತ್ತೆ ಸಂಕಷ್ಟ ಎದುರಿಸುತ್ತಿರುವ ಸಲ್ಮಾನ್ ಖಾನ್ ನಟನೆಯ ‘ಭರತ್’ ಚಿತ್ರ

ಮತ್ತೆ ಸಂಕಷ್ಟ ಎದುರಿಸುತ್ತಿರುವ ಸಲ್ಮಾನ್ ಖಾನ್ ನಟನೆಯ ‘ಭರತ್’ ಚಿತ್ರ
ಮುಂಬೈ , ಶನಿವಾರ, 17 ನವೆಂಬರ್ 2018 (07:18 IST)
ಮುಂಬೈ : ಬಾಲಿವುಡ್‍ ನ ಸ್ಟಾರ್ ನಟ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ನಟಿಸಿದ ಭರತ್ ಚಿತ್ರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆಯಂತೆ.


ಅಲಿ ಅಬ್ಬಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ  ಭರತ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕಾಗಿದ್ದ ಪ್ರಿಯಾಂಕ ಚೋಪ್ರಾ ಕೈಕೊಟ್ಟ ಹಿನ್ನಲೆಯಲ್ಲಿ ಈ ಹಿಂದೆ ಬಾರೀ ಸುದ್ದಿಯಾಗಿತ್ತು. ನಂತರ ಕತ್ರಿನಾ ಕೈಫ್ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದರು.


ಆದರೆ ಇದೀಗ 200 ಕೋಟಿ ವೆಚ್ಚದಲ್ಲಿ ರೆಡಿಯಾಗುತ್ತಿರುವ ಈ ಚಿತ್ರಕ್ಕೆ ಆರ್ಥಿಕ ತೊಂದರೆ ಎದುರಾಗಿದೆಯಂತೆ. ಭಾರತ್ ಚಿತ್ರದ ಸಹ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ಆಗಿದೆ ಎಂಬ ಆರೋಪ ಇದೀಗ ಕೇಳಿ ಬಂದಿದೆ. ಈ ಕಾರಣಕ್ಕೆ ಸಹ ಕಲಾವಿದರು ಶೂಟಿಂಗ್ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಂಕಾಕ್‌ ನಲ್ಲಿ 'ಗೋಲ್ಡನ್‌ ಲೀಫ್‌ ಐಸ್‌ಕ್ರೀಂ' ತಿಂದ ಶಿಲ್ಪಾ ಶೆಟ್ಟಿ ಹೇಳಿದ್ದೇನು?