ವಿರಾಟ್ ಕೊಹ್ಲಿ ಎಲ್ಲರಿಗೂ ಇಷ್ಟವಾಗುವುದು ಇದೇ ಕಾರಣಕ್ಕೆ!

ಸೋಮವಾರ, 11 ಫೆಬ್ರವರಿ 2019 (10:48 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಇಷ್ಟಪಡಲು ಇರುವ ಕಾರಣವೇನೆಂದು ಆಸ್ಟ್ರೇಲಿಯಾ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಬಹಿರಂಗಪಡಿಸಿದ್ದಾರೆ.


ಎಲ್ಲರಿಗೂ ಕೊಹ್ಲಿ ಇಷ್ಟವಾಗುತ್ತಾರೆ. ಯಾಕೆಂದರೆ ಅವರು ಪ್ರಾಮಾಣಿಕವಾಗಿ ಮಾತನಾಡುತ್ತಾರೆ ಎಂದು ಶೇನ್ ಅಭಿಪ್ರಾಯಪಟ್ಟಿದ್ದಾರೆ.

‘ನಾನೂ ಕೊಹ್ಲಿ ಅಭಿಮಾನಿ. ಅವರು ಪ್ರಾಮಾಣಿಕವಾಗಿ ಮಾತನಾಡುತ್ತಾರೆ. ಅವರು ಹೇಳಿದ ಮಾತಿಗೆ ಬದ್ಧರಾಗಿರುತ್ತಾರೆ. ಬರೀ ಆಸ್ಟ್ರೇಲಿಯನ್ನರು ಮಾತ್ರವಲ್ಲ, ಇಡೀ ವಿಶ್ವವೇ ಅವರನ್ನು ಇಷ್ಟಪಡುತ್ತದೆ. ಈಗಾಗಲೇ ಅವರು ವಿಶ್ವದ ಸರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿದ್ದಾರೆ’ ಎಂದು ಶೇನ್ ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING