ರೋಹಿತ್ ಶರ್ಮಾಗೆ ಟಿ20 ಯಲ್ಲಿ ಸಿಕ್ಸರ್ ಕಿಂಗ್ ಆಗುವ ಅವಕಾಶ!

ಭಾನುವಾರ, 10 ಫೆಬ್ರವರಿ 2019 (07:55 IST)
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಮೂರನೇ ಟಿ20 ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾಗೆ ಟಿ20 ಮಾದರಿಯಲ್ಲಿ ಅತೀ ಹೆಚ್ಚು ಸಿಕ್ಸರ್ ಗಳಿಸಿದ ದಾಖಲೆ ಮಾಡುವ ಅವಕಾಶ ಎದುರಾಗಿದೆ.


ಹಿಟ್ ಮ್ಯಾನ್ ‍ಎಂದೇ ಕರೆಸಿಕೊಳ್ಳುವ ರೋಹಿತ್ ಕಳೆದ ಪಂದ್ಯದಲ್ಲಿ ಒಟ್ಟು ನಾಲ್ಕು ಸಿಕ್ಸರ್ ಸಿಡಿಸಿದ್ದರು. ಈಗ ಅವರ ಬತ್ತಳಿಕೆಯಲ್ಲಿ 101 ಸಿಕ್ಸರ್ ಗಳಿವೆ.

ಇನ್ನು ಎರಡು ಸಿಕ್ಸರ್ ಸಿಡಿಸಿದರೆ ರೋಹಿತ್ ಟಿ20 ಮಾದರಿ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ. ಸದ್ಯಕ್ಕೆ ಈ ದಾಖಲೆ ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಟಿಲ್ ಮತ್ತು ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಇವರಿಬ್ಬರೂ 103 ಸಿಕ್ಸರ್ ಗಳೊಂದಿಗೆ ಜಂಟಿ ಅಗ್ರ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING