ರಜೆ ಮುಗಿಸಿ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ

ಮಂಗಳವಾರ, 5 ಫೆಬ್ರವರಿ 2019 (09:24 IST)
ಮುಂಬೈ: ಬಿಡುವಿಲ್ಲದ ಕ್ರಿಕೆಟ್ ನಿಂದ ಬಿಡುವು ಪಡೆದು ಕೆಲವು ದಿನಗಳ ಕಾಲ ಪತ್ನಿ ಜತೆ ನ್ಯೂಜಿಲೆಂಡ್ ನಲ್ಲಿ ರಜೆಯ ಮಜಾ ಅನುಭವಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಭಾರತಕ್ಕೆ ಮರಳಿದ್ದಾರೆ.


ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ನಿನ್ನೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗೂ ಮೊದಲು ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಹೀಗಾಗಿ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಕೊಹ್ಲಿ ಆಡುತ್ತಿಲ್ಲ. ನ್ಯೂಜಿಲೆಂಡ್ ನಲ್ಲಿ ಕೊಹ್ಲಿ ದಂಪತಿ ರೊಮ್ಯಾಂಟಿಕ್ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಬಿಗಿ ಭದ್ರತೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೊಹ್ಲಿ ತಾವೇ ಕಾರು ಚಲಾಯಿಸಿಕೊಂಡು ಮನೆಯತ್ತ ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING