Select Your Language

Notifications

webdunia
webdunia
webdunia
webdunia

ಹಲಸಿನ ಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನವಿದೆ ನೋಡಿ!

ಹಲಸಿನ ಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನವಿದೆ ನೋಡಿ!
ಬೆಂಗಳೂರು , ಸೋಮವಾರ, 12 ಮಾರ್ಚ್ 2018 (11:12 IST)
ಬೆಂಗಳೂರು : ಹಲಸಿನ ಹಣ್ಣು ತಿನ್ನಲು ಎಷ್ಟು ರುಚಿಯೋ ಹಾಗೇ ಈ ಹಣ್ಣು  ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದೆ. ಈ ಹಣ್ಣನ್ನು ತಿನ್ನುವುದರಿಂದ ಮನುಷ್ಯನ ಆರೋಗ್ಯಕ್ಕೆ ಎಷ್ಟು ಲಾಭಗಳಿವೆ ಎಂದು ತಿಳಿಬೇಕಾ …?


*ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

*ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆಯನ್ನು ಇದು ತಡೆಯುತ್ತದೆ.

* ಇದರಲ್ಲಿ ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.

*ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. 

*ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.

*ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಈ ಹಣ್ಣು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇರಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

*ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

*ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದಪ್ಪಗಾಗಬೇಕೇ…? ಇದನ್ನು ತಿನ್ನಿರಿ ಬೇಗ ತೂಕ ಹೆಚ್ಚಾಗುತ್ತದೆ ನೋಡಿ!