Select Your Language

Notifications

webdunia
webdunia
webdunia
webdunia

ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಮೂರು ಬೆಸ್ಟ್ ಪಾನೀಯ ಸೇವಿಸಿ

ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಮೂರು ಬೆಸ್ಟ್ ಪಾನೀಯ ಸೇವಿಸಿ
ನವದೆಹಲಿ , ಶುಕ್ರವಾರ, 21 ಜುಲೈ 2023 (09:43 IST)
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ  ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಒತ್ತಡದ ಜೀವನಶೈಲಿಯ ಕಾರಣದಿಂದಾಗಿ ಅನೇಕ ಜನರು ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ.
 
ಇದನ್ನು ಸರಿಯಾಗಿ ನಿರ್ವಹಿಸದಿದ್ದರೆ, ಅಂತಿಮವಾಗಿ ಇದು ಹೃದಯರಕ್ತನಾಳಗಳ ಕಾಯಿಲೆಗಳು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಹಾಗಾಗಿ ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವ ಮೂಲಕ ರಕ್ತದೊತ್ತಡವನ್ನು ಖಂಡಿತವಾಗಿಯೂ ನಿಯಂತ್ರಣದಲ್ಲಿಡಬಹುದು. ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ನಾವು ಸೇವಿಸುವಂತಹ ಆಹಾರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಹೆಚ್ಚಿನ ಪ್ರಮಾಣದ ಸೋಡಿಯಂ ಹೊಂದಿರುವ ಆಹಾರದ ಸೇವನೆಯು ಅಧಿಕ ರಕ್ತದೊತ್ತಡವನ್ನು ಉಂಟುಮಾಡಬಹುದು. ಹಾಗೆಯೇ ಪೊಟ್ಯಾಸಿಯಂ, ಮೆಗ್ನೇಸಿಯಮ್ ಮತ್ತು ಫೈಬರ್ ಅಂಶಗಳಿಂದ ಸಮೃದ್ಧವಾಗಿರುವ ಆಹಾರಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕರ ರೀತಿಯಲ್ಲಿ ರಕ್ತದೊತ್ತಡದ ಮಟ್ಟವನ್ನು ಕಾಪಾಡಿಕೊಳ್ಳಲು ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಫ್ರೋಟೀನ್ ಮತ್ತು ಕಡಿಮೆ ಕೊಬ್ಬಿನಾಂಶವಿರುವ ಆಹಾರವನ್ನು ಸೇವಿಸಬೇಕಾಗುತ್ತದೆ. ಇನ್ನೂ ಈ ಕೆಲವು ಪಾನೀಯಗಳನ್ನು ಸೇವಿಸುವ ಮೂಲಕವೂ ನೀವು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟುಕೊಳ್ಳಬಹುದು.

ಅಮೇರಿಕನ್ ಹಾರ್ಟ್ ಅಸೋಸಿಯೇನ್ ಪ್ರಕಾರ, ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಾಗದಂತೆ ಹಾಗೂ ಭಾದಿಸದಂತೆ ನೋಡಿಕೊಳ್ಳಲು ಆರೋಗ್ಯಕರ ಜೀವನಶೈಲಿಯನ್ನು ಅಭ್ಯಾಸ ಮಾಡುವುದು ಅತ್ಯಗತ್ಯ. ಮುಖ್ಯವಾಗಿ ಉಪ್ಪಿನಾಂಶ ಕಡಿಮೆ ಇರುವ ಆಹಾರಗಳನ್ನು ಸೇವನೆ ಮಾಡುವುದು ಮುಖ್ಯವಾಗಿದೆ.

ಬೀಟ್ರೂಟ್ ಮತ್ತು ಟೊಮೆಟೊ ಜ್ಯೂಸ್
ಬೀಟ್ರೂಟ್ ನಲ್ಲಿ ನೈಟ್ರೇಟ್ ಅಂಶವು ಸಮೃದ್ಧವಾಗಿದೆ. ಇದು ರಕ್ತ ಪರಿಚಲನೆಯನ್ನು ಸುಧಾರಿಸಿ ರಕ್ತದೊತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಟೊಮಟೊ ಲೈಕೋಪೀನ್, ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ಇ ನಂತಹ ಪೋಷಕಾಂಶಗಳನ್ನು ಹೊಂದಿದೆ, ಇದು ರಕ್ತದೊತ್ತಡವನ್ನು ಸುಧಾರಿಸುವ ಪರಿಣಾಮಕಾರಿ ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತದೆ.

ಕೊತ್ತಂಬರಿ ಬೀಜದ ನೀರು
ಕೊತ್ತಂಬರಿ ಬೀಜದ ನೀರು ಮೂತ್ರ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ದೇಹದಿಂದ ಹೆಚ್ಚುವರಿ ಸೋಡಿಯಂ ಮತ್ತು ನೀರನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗೂ ಇದು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

ದಾಳಿಂಬೆ ಜ್ಯೂಸ್
ದಾಳಿಂಬೆ ಫೋಲೆಟ್ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಅಲ್ಲದೆ ಉತ್ಕರ್ಷಣ ನಿರೋಧಕಗಳ ಉಪಸ್ಥಿತಿಯಿಂದಾಗಿ ದಾಳಿಂಬೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ದಾಳಿಂಬೆ ಜ್ಯೂಸ್ನ್ನು ಪ್ರತಿದಿನ ಸೇವಿಸುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪಾನ ಮಾಡುವಾಗ ಈ ಪದಾರ್ಥಗಳನ್ನು ತಿನ್ನಲೇಬಾರದು ಯಾಕೆ ಗೊತ್ತಾ?