ಪತಿ ಪರಸ್ತ್ರೀ ಜೊತೆ ಸಂಬಂಧ ಬೆಳೆಸಿದ್ದಾನೆ ಎಂಬ ಸಂಶಯದಿಂದ ಪತ್ನಿ ಮಾಡಿದ್ದೇನು ಗೊತ್ತಾ?

ಶುಕ್ರವಾರ, 11 ಜನವರಿ 2019 (07:12 IST)
ಥೈಲ್ಯಾಂಡ್ : ಪತಿ ಪರಸ್ತ್ರೀ ಜೊತೆ ಸಂಬಂಧ ಬೆಳೆಸಿದ್ದಾನೆ ಎಂದು ಅನುಮಾನಗೊಂಡ ಪತ್ನಿ ಆತನ  ಖಾಸಗಿ ಅಂಗವನ್ನೇ  ಕತ್ತರಿಸಿದ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ.


ಕರುಣ್(24) ಪತ್ನಿಯಿಂದ ಹಲ್ಲೆಗೊಳಗಾದ ಪತಿ. ಈತ ಪರಸ್ತ್ರೀ ಜೊತೆ ಸಂಬಂಧ ಬೆಳೆಸಿದ್ದಾನೆ ಎಂದು ಅನುಮಾನಗೊಂಡ  ಪತ್ನಿ ಇನ್ಮುಂದೆ ಯಾರ ತಂಟೆಗೂ ಆತ ಹೋಗಬಾರದು ಎಂದು ಆತನನ್ನು ಸೆಕ್ಸ್ ಗೆ ಉತ್ತೇಜಿಸಿ ಆತನ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ. ಅಷ್ಟೇ ಅಲ್ಲದೇ ಕೋಪದಿಂದ ಆ ಅಂಗವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಳಂತೆ.


ಪತಿಯ ಕೂಗಾಟ ಕೇಳಿ ಸ್ಥಳಕ್ಕೆ ಬಂದ ನೆರೆಹೊರೆಯವರು ಆತನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ಘಟನೆಯ ಕುರಿತು ಪತ್ನಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING