Select Your Language

Notifications

webdunia
webdunia
webdunia
webdunia

ಐಪಿಎಲ್ ಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಐಪಿಎಲ್ ಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ
Mumbai , ಗುರುವಾರ, 29 ಜೂನ್ 2017 (08:42 IST)
ಮುಂಬೈ: ಐಪಿಎಲ್ ಏಪ್ರಿಲ್-ಮೇ ತಿಂಗಳಿಗೆ ಅಭಿಮಾನಿಗಳಿಗೆ ರಸದೌತಣ ನೀಡುತ್ತಿದೆ. ಆದರೆ ಇಷ್ಟೇ ಸಾಲದು ಎನ್ನುವವರಿಗೆ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಶುಭ ಸುದ್ದಿ ನೀಡಿದ್ದಾರೆ.

 
ಮುಂದಿನ ದಿನಗಳಲ್ಲಿ ವಿದೇಶದಲ್ಲಿ ಮಿನಿ ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ. ಐಪಿಎಲ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಕ್ರೇಜ್ ನೋಡಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ದುಬೈನಲ್ಲಿ ಮಿನಿ ಐಪಿಎಲ್ ಆಯೋಜಿಸುವ ಬಗ್ಗೆ ಯೋಜನೆ ರೂಪಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೆಲ ಸಮಯದ ಹಿಂದೆ ಚಾಂಪಿಯನ್ಸ್ ಕ್ರಿಕೆಟ್ ಲೀಗ್ ನಡೆಯುತ್ತಿತ್ತು. ಅದು ರದ್ದಾದ ಕಾರಣ ಅದೇ ಜಾಗದಲ್ಲಿ ಮಿನಿ ಐಪಿಎಲ್ ಆಯೋಜಿಸಲು ಚಿಂತನೆ ನಡೆಸಲಾಗಿದೆಯಂತೆ. ಹಾಗಾದಲ್ಲಿ ಅಭಿಮಾನಿಗಳಿಗೆ ಮತ್ತಷ್ಟು ಮನರಂಜನೆ ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರವಿ ಶಾಸ್ತ್ರಿ ಮನ ಒಲಿಸಿದ್ದು ಸಚಿನ್ ತೆಂಡುಲ್ಕರ್?!