Select Your Language

Notifications

webdunia
webdunia
webdunia
webdunia

ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ: ಮೋದಿ ಪ್ರತಿಕೃತಿ ದಹನ

ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ: ಮೋದಿ ಪ್ರತಿಕೃತಿ ದಹನ
ಬೆಂಗಳೂರು , ಮಂಗಳವಾರ, 29 ಮೇ 2018 (18:54 IST)
ಚಾಮರಾಜನಗರ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ, ಚಾಮರಾಜನಗರದಲ್ಲಿ ಪ್ರಗತಿ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಒಂಟಿ ಎತ್ತಿನ ಗಾಡಿ ಮೇಲೆ ಬೈಕ್ ನಿಲ್ಲಿಸಿ, ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರಗತಿಪರ ಸಂಘಟನೆಯ ಕಾರ್ಯಕರ್ತರು, ಕೆಲಕಾಲ ರಸ್ತೆ ತಡೆ ನಡೆಸಿದರು.
 
 ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು,ಪ್ರಧಾನಿ ಮೋದಿ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
 
ಈ ವೇಳೆ ಮಾತನಾಡಿದ ಪ್ರಗತಿ ಪರ ಸಂಘಟನೆಯ ಮುಖಂಡ ಕೃಷ್ಣಮೂರ್ತಿ, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆ ನೀಡಿ ಕಾಲ ಕಳೆಯುತ್ತಿದೆ, ಪ್ರತಿ ದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ, ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿವೆ ಎಂದು ಆರೋಪಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಾಚಾರ್ಯ ಸ್ವಾಮಿಜಿ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಭಾರಿ ಪ್ರತಿಭಟನೆ