ಸಂಗೀತ ನಿರ್ದೇಶಕ ಸಾಧು ಕೋಕಿಲ ಸಿಸಿಬಿ ಪೊಲೀಸರನ್ನು ಭೇಟಿ ಮಾಡಿದ್ಯಾಕೆ?

ಮಂಗಳವಾರ, 10 ಜುಲೈ 2018 (18:42 IST)
ಬೆಂಗಳೂರು : ರೌಡಿ ಶೀಟರ್ ಸೈಕಲ್ ರವಿಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನ ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.


ಜೂನ್ 27ರಂದು ರಾಜರಾಜೇಶ್ವರಿನಗರದ ನೈಸ್‍ರೋಡ್ ಬಳಿ ರೌಡಿ ಸೈಕಲ್ ರವಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನದಲ್ಲಿ ಇರಿಸಿಕೊಂಡು ತನಿಖೆ ನಡೆಸಿದ್ದರು. ಆ ವೇಳೆ ಸೈಕಲ್ ರವಿಗೆ ಸಾಧು ಕೋಕಿಲಾ ಏಳೆಂಟು ಬಾರಿ ಕರೆ ಮಾಡಿದ್ದ ಬಗ್ಗೆ ಸಾಕ್ಷ್ಯ ಸಿಕ್ಕಿದ ಹಿನ್ನೆಲೆಯಲ್ಲಿ ಸಾಧುಕೋಕಿಲಾರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.


ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಗೆ ತೆರಳಿದ ಸಾಧು ಕೋಕಿಲ, ಅಲ್ಲಿ ಹಿರಿಯ ಅಧಿಕಾರಿಯನ್ನು ಭೇಟಿ ಮಾಡಿದರು. ವಿಚಾರಣೆಯ ವೇಳೆ  ತಮಗೂ ಸೈಕಲ್ ರವಿಗೂ ಸಂಬಂಧವಿಲ್ಲ. ಆದರೂ ಈ ಪ್ರಕರಣದಲ್ಲಿ ತಮ್ಮ ಹೆಸರು ಏಕೆ ಕೇಳಿಬರುತ್ತಿದೆ ಎಂದು ವಿಚಾರಿಸಿದರು ಎನ್ನಲಾಗಿದೆ. ಕಚೇರಿಯಿಂದ ಹೊರಬಂದ ಸಾಧು ಕೋಕಿಲ, ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING