Select Your Language

Notifications

webdunia
webdunia
webdunia
webdunia

ರಜನಿಕಾಂತ್ 2.0 ಟೀಸರ್ ಬಿಡುಗಡೆ ದಿನಾಂಕ ಫಿಕ್ಸ್

ರಜನಿಕಾಂತ್ 2.0 ಟೀಸರ್ ಬಿಡುಗಡೆ ದಿನಾಂಕ ಫಿಕ್ಸ್
Chennai , ಭಾನುವಾರ, 29 ಜನವರಿ 2017 (08:32 IST)
ಈ ವರ್ಷದ ಅತ್ಯಂತ ನಿರೀಕ್ಷಿತ ಚಿತ್ರ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0. ಈ ಚಿತ್ರದ ಟೀಸರ್ ಬಿಡುಗಡೆ ಏಪ್ರಿಲ್ 14ರಂದು ನಡೆಯಲಿದೆ. ತಮಿಳು ಹೊಸ ವರ್ಷದ ಹಿನ್ನೆಲೆಯಲ್ಲಿ ಅಂದು ಟೀಸರ್ ಬಿಡುಗಡೆ ಮಾಡುತ್ತಿರುವುದಾಗಿ ಚಿತ್ರತಂಡ ತಿಳಿಸಿದೆ.
 
ಸದ್ಯಕ್ಕೆ ಮಹಾಬಲಿಪುರಂನಲ್ಲಿ ಹಾಕಲಾಗಿರುವ ಭಾರಿ ಸೆಟ್‌ನಲ್ಲಿ 2.0 ಚಿತ್ರದ ಶೂಟಿಂಗ್ ನಡೆಯುತ್ತಿದೆ. ಇತ್ತೀಚೆಗೆ ತನ್ನ ಪಾತ್ರಕ್ಕೆ ರಜನಿ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಹೇಳಿದ್ದು ಗೊತ್ತೇ ಇದೆ. ಶಂಕರ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದ ನಾಯಕಿ ಬ್ರಿಟೀಷ್ ಬೆಡಗಿ ಎಮಿ ಜಾಕ್ಸನ್.
 
ವಿಶೇಷ ಎಂದರೆ ಬಾಲಿವುಡ್ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಚಿತ್ರದಲ್ಲಿ ವಿಲನ್ ಆಗಿ ಕಾಣಿಸುತ್ತಿರುವುದು. ಎ.ಆರ್. ರೆಹಮಾನ್ ಸಂಗೀತ ಚಿತ್ರದ ಇನ್ನೊಂದು ಆಕರ್ಷಣೆ ಎನ್ನಬಹುದು. ಸರಿಸುಮಾರು ರೂ.400 ಕೋಟಿ ವೆಚ್ಚದಲ್ಲಿ ಚಿತ್ರವನ್ನು ತೆರೆಗೆ ತರಲಾಗುತ್ತಿದ್ದು ದೀಪಾವಳಿ ಹಬ್ಬಕ್ಕೆ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಚ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ ಮುಂದಿನ ಚಿತ್ರ