Select Your Language

Notifications

webdunia
webdunia
webdunia
webdunia

ಕುಡಿದ ಅಮಲಿನಲ್ಲಿ ಹೆತ್ತ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನೀಚ ಮಗ

ಕುಡಿದ ಅಮಲಿನಲ್ಲಿ ಹೆತ್ತ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನೀಚ ಮಗ
ವಿಜಯವಾಡ , ಬುಧವಾರ, 13 ಫೆಬ್ರವರಿ 2019 (08:15 IST)
ವಿಜಯವಾಡ : ಕುಡಿದ ಮತ್ತಿನಲ್ಲಿ ನೀಚ ಮಗನೊಬ್ಬ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ  ಹೆತ್ತ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೃಷ್ಣ ಜಿಲ್ಲೆಯ ವುಯ್ಯುರು ಎಂಬಲ್ಲಿ ನಡೆದಿದೆ.


ವೃದ್ದ ತಾಯಿಗೆ 86 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಈಕೆಗೆ ಮೂರು ಮಕ್ಕಳಿದ್ದು, ಕಿರಿಯ ಮಗನಾದ ಈತ ಕುಡಿದ ಅಮಲಿನಲ್ಲಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಈ ಕೃತ್ಯ ಎಸಗಿದ್ದಾನೆ. ಈ ವಿಚಾರವನ್ನು ವೃದ್ದ ತಾಯಿ ನೆರೆಹೊರೆಯವರ ಬಳಿ ಹೇಳಿದಾಗ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ವಿಚಾರ ತಿಳಿದ ಆರೋಪಿ ಮಗ ಪರಾರಿಯಾಗಿದ್ದಾನೆ.


ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ಥೆ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ ಬುಕ್ ಗೆಳೆಯನ ಬರ್ತ್ ಡೇ ಪಾರ್ಟಿಗೆ ಹೋದ ಯುವತಿಗೆ ಆಗಿದ್ದೇನು ಗೊತ್ತಾ?