Select Your Language

Notifications

webdunia
webdunia
webdunia
webdunia

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದ ನಟಿ ರಮ್ಯಾ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದ ನಟಿ ರಮ್ಯಾ
ಬೆಂಗಳೂರು , ಸೋಮವಾರ, 10 ಸೆಪ್ಟಂಬರ್ 2018 (11:20 IST)
ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿರುವುದಕ್ಕೆ ಇದೀಗ ಸ್ಯಾಂಡಲ್ ವುಡ್ ನಟಿ ರಮ್ಯಾ ಟ್ವೀಟರ್ ನಲ್ಲಿ ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.


ರಮ್ಯಾರವರು  ಈಗಾಗಲೇ ಹಲವು ಬಾರಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಲೇವಡಿ ಮಾಡಿದ್ದಾರೆ. ಅದೇರೀತಿ ಇದೀಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ.


ಅವರು ತಮ್ಮ ಟ್ವಿಟ್ಟರ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ವೈಯಕ್ತಿಕವಾಗಿ ರವೀಂದ್ರ ಜಡೇಜಾರವರು 86 ರನ್ ಗಳಿಸಿದ್ದಾರೆ. ಆದರೆ ಅವರು ಗಳಿಸಿದ್ದು ಭಾರತದಲ್ಲಿ 2ನೇ ಅತ್ಯಧಿಕ ರನ್ ಆಗಿದೆ. ಮೊದಲನೇಯ ಅತ್ಯಧಿಕ ರನ್ ಭಾರತದ ಪೆಟ್ರೋಲ್ ದರವೇ 87 ಆಗಿದೆ ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ್ ಬಂದ್ ಗೆ ವಿರೋಧ ವ್ಯಕ್ತಪಡಿಸಿದ ಹಿರಿಯ ಕಾಂಗ್ರೆಸ್ ಮುಖಂಡ