Select Your Language

Notifications

webdunia
webdunia
webdunia
webdunia

ಮೈತ್ರಿ ಅಸಮಾಧಾನ: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ

Congress

Sampriya

ಬೆಂಗಳೂರು , ಶುಕ್ರವಾರ, 29 ಮಾರ್ಚ್ 2024 (17:55 IST)
Photo Courtesy X
ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಸಮಾಧಾನದಿಂದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಜೀರ್ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು.

ಉಪಮುಖ್ಯಮಂತ್ರಿ ಡಿ.ಕೆ.ಸುರೇಶ್ ಅವರು ಕಾಂಗ್ರೆಸ್‌ನ ಶಾಲನ್ನು ಹಾಕುವ ಮೂಲಕ ನಜ್ಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.

ನಜ್ಮಾ ಅವರು 2020ರಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಅವರು ಜಾತ್ಯತೀತ ಜನತಾ ದಳ ಪಕ್ಷವನ್ನು ಅವರು ಸೇರ್ಪಡೆಗೊಂಡಿದ್ದರು.

ನಜ್ಮಾ ನಜೀರ್ ಅವರು ಕಳೆದ ನಾಲ್ಕೈದು ವರ್ಷಗಳಿಂದ ದಮನಿತರ ಧ್ವನಿಯಾಗಿ ಸಾಮಾಜಿಕ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಎನ್‌ಸಿಆರ್, ಸಿಐಎ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಜ್ಮಾ ನಜೀರ್ ಅವರು ಮೂಲತಃ ಪಿರಿಯಾಪಟ್ಟಣದವರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರ ವಿರುದ್ಧ ಚುನಾವನಾ ಆಯೋಗಕ್ಕೆ ದೂರು