Select Your Language

Notifications

webdunia
webdunia
webdunia
webdunia

ಮಂಡ್ಯ ಜನತೆಯ ಒತ್ತಾಯದ ಮೇರೆಗೆ ಅಂಬಿ ಪಾರ್ಥೀವ ಶರೀರ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ರವಾನೆ

ಮಂಡ್ಯ ಜನತೆಯ ಒತ್ತಾಯದ ಮೇರೆಗೆ ಅಂಬಿ  ಪಾರ್ಥೀವ ಶರೀರ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ರವಾನೆ
ಬೆಂಗಳೂರು , ಭಾನುವಾರ, 25 ನವೆಂಬರ್ 2018 (11:43 IST)
ಬೆಂಗಳೂರು : ನಟ ಅಂಬರೀಶ್ ಅವರ ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ತರಬೇಕೆಂದು ಜನರು ಒತ್ತಾಯ ಮಾಡುತ್ತಿರುವ ಹಿನ್ನಲೆಯಲ್ಲಿ ಹೆಲಿಕಾಪ್ಟರ್ ಮೂಲಕ ಪಾರ್ಥಿವ ಶರೀರವನ್ನುಮಂಡ್ಯಕ್ಕೆ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.


ಅಂಬರೀಶ್ ಅಂತಿಮ ದರ್ಶನ ಪಡೆದು ಮಾತನಾಡಿದ ಸಿಎಂ, ಸಂಜೆ 4 ರಿಂದ ಬೆಳಿಗ್ಗೆ 6ರವರೆಗೆ ಮಂಡ್ಯದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.


ಸೇನಾ ಹೆಲಿಕಾಪ್ಟರ್ ನೀಡುವಂತೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಇದೀಗ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ  ಸೇನಾ ಹೆಲಿಕಾಪ್ಟರ್ ಮೂಲಕ ಅಂಬರೀಶ್ ಅವರ ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ರವಾನಿಸಲು ಸಿದ್ಧತೆ ಮಾಡಲಾಗಿದೆ. ಮಂಡ್ಯದ ವಿಶ್ವೇಶ್ವರ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ರಕರ್ತರೊಬ್ಬರ ಪ್ರಶ್ನೆಯಿಂದ ಬೇಸರಗೊಂಡ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ: ಅಷ್ಟಕ್ಕೂ ಆತ ಕೇಳಿದ್ದೇನು ಗೊತ್ತಾ?