ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರ; ಬಿಜೆಪಿಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಮಂಗಳವಾರ, 12 ಫೆಬ್ರವರಿ 2019 (14:15 IST)
ಬೆಂಗಳೂರು : ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಹಾಗೂ ಬಿಎಸ್ ವೈ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬಜೆಟ್ ಗೂ ಮುನ್ನ ಸಿಎಂ ಕುಮಾರಸ್ವಾಮಿ ರಿಲೀಸ್ ಮಾಡಿದ ಆಪರೇಷನ್ ಕಮಲದ ಆಡಿಯೋ ಇದೀಗ ರಾಜಕೀಯ ವಲಯದಲ್ಲಿ ಬಾರೀ ಸಂಚಲನ ಮೂಡಿಸಿದ್ದು, ಈ ಪ್ರಕರಣಕ್ಜೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಮಾನ ಹರಾಜು ಹಾಕಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ.

 

ಹೌದು. ಬಿಜೆಪಿ ಆಪರೇಷನ್ ಕಮಲದ ಆಡಿಯೋ ಬಗ್ಗೆ ಬಿಎಸ್‍ವೈ ಮತ್ತು ಬಿಜೆಪಿ ವಿರುದ್ಧ ರಾಷ್ಟ್ರಪತಿಗಳಿಗೆ ಸಾಕ್ಷ್ಯ ಸಮೇತ ದೂರು ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬಿಎಸ್ ವೈ ಆಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಲು ತಯಾರಿ ನಡೆಸಲಾಗಿದೆ.

 

ಅಲ್ಲದೇ ಪ್ರಕರಣ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಧ್ಯಪ್ರವೇಶ ಮಾಡುವಂತೆ ಕಾಂಗ್ರೆಸ್ ನಿಯೋಗ ಮನವಿ ಮಾಡಿಕೊಳ್ಳಲಿದೆ ಎನ್ನಲಾಗಿದೆ. ನಾಳೆ ಸಂಸತ್ ಅಧಿವೇಶನ ಮುಗಿದ ಕೂಡಲೇ ರಾಷ್ಟ್ರಪತಿಗಳಿಗೆ ದೂರು ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING