Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ

Bomb threat

Krishnaveni K

ಬೆಂಗಳೂರು , ಶನಿವಾರ, 6 ಜನವರಿ 2024 (09:41 IST)
ಬೆಂಗಳೂರು: ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆಯೊಂದು ಬಂದಿದೆ.

ಕೆಲವು ದಿನಗಳ ಹಿಂದೆ ಶಾಲೆಗಳಿಗೆ ಬಾಂಬ್ ಹಾಕುವುದಾಗಿ ಅಜ್ಞಾತ ವ್ಯಕ್ತಿಯಿಂದ ಈಮೇಲ್ ಬಂದಿತ್ತು. ಇದರಿಂದ ಪೋಷಕರು ಆತಂಕಕ್ಕೀಡಾಗಿದ್ದರು. ಅದಾದ ಬಳಿಕ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬೆದರಿಕೆ ಬಂದಿತ್ತು. ಇದೀಗ ಅಂತಹದ್ದೇ ಮತ್ತೊಂದು ಬಾಂಬ್ ಬೆದರಿಕೆ ಬಂದಿದೆ.

ಮುಂಬೈನಲ್ಲಿರುವ ಕಚೇರಿಗೆ ಫೋನ್ ಮಾಡಿ ಬೆಂಗಳೂರು ಶಾಖಾ ಕಚೇರಿಗೆ ಬಾಂಬ್ ಇಡಲಾಗಿದೆ ಎಂದು ಅಜ್ಞಾತ ವ್ಯಕ್ತಿಗಳು ಎಚ್ಚರಿಕೆ ನೀಡಿದ್ದಾರೆ. ತಕ್ಷಣವೇ ಮುಂಬೈ ಕಚೇರಿ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿತ್ತು. 

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಂಬ್ ನಿಷ್ಕ್ರಿಯದಳದ ಸಹಾಯದೊಂದಿಗೆ ತೀವ್ರ ತಪಾಸಣೆ ನಡೆಸಿದ್ದಾರೆ. ಆದರೆ ಎಲ್ಲಿಯೂ ಸ್ಪೋಟಕವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿಲ್ಲ. ಇದೀಗ ವಿಧಾನಸೌಧ ಠಾಣಾ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ