Select Your Language

Notifications

webdunia
webdunia
webdunia
webdunia

ಎಚ್‌ಡಿಕೆ ಪರ ಸುಮಲತಾ ಮಂಡ್ಯದಲ್ಲಿ ಪ್ರಚಾರ: ವಿಪಕ್ಷ ನಾಯಕ ಆರ್‌.ಅಶೋಕ್

ಎಚ್‌ಡಿಕೆ ಪರ ಸುಮಲತಾ ಮಂಡ್ಯದಲ್ಲಿ ಪ್ರಚಾರ: ವಿಪಕ್ಷ ನಾಯಕ ಆರ್‌.ಅಶೋಕ್

Sampriya

ಬೆಂಗಳೂರು , ಶುಕ್ರವಾರ, 12 ಏಪ್ರಿಲ್ 2024 (17:06 IST)
ಬೆಂಗಳೂರು: ಈಚೆಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ನಮ್ಮ ಪಕ್ಷದ ಸ್ಟಾರ್ ಪ್ರಚಾರಕರು ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಮಂಡ್ಯ ನಗರದ ಹೊರ ವಲಯದಲ್ಲಿರುವ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಸದೆ ಸುಮಲತಾ ಅಂಬರೀಶ್ ಅವರು ನಮ್ಮ ಪಕ್ಷದ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವಾಗ ದಿನಾಂಕ ಗೊತ್ತುಪಡಿಸುತ್ತಾರೋ ಅಂದು ಸುಮಲತಾ ಮಂಡ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.

ಕೇವಲ ಮಂಡ್ಯ ಮಾತ್ರವಲ್ಲದೆ, ಮೈಸೂರು, ಬೆಂಗಳೂರು, ಚಾಮರಾಜನಗರ ಸೇರಿದಂತೆ ಹಲವೆಡೆ ಶುದ್ಧ ಮನಸ್ಸಿನಿಂದ ಪ್ರಚಾರ ಮಾಡಲಿದ್ದಾರೆ. ಜೊತೆಗೆ ಮೋದಿಯವರ ಸಮಾವೇಶದಲ್ಲೂ ವೇದಿಕೆ ಮೇಲೆ ಇರಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ  ಅಭ್ಯರ್ಥಿ ಎಚ್‌ ಡಿ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರ ಮಧ್ಯೆ ಈ ಹಿಂದಿನ ಲೋಕಸಭೆ ಚುನಾವಣೆ ವೇಳೆ ಮಾತಿನ ಚಕಮಕಿ ಜೋರಾಗಿ ನಡೆದಿತ್ತು.

ಇನ್ನೂ ಈ ಬಾರಿ ಮಂಡ್ಯ ಲೋಕಸಭೆ ಟಿಕೆಟ್ ಮಿಸ್ ಆಗಿದ್ದರಿಂದ ಸುಮಲತಾ ಮುನಿಸಿಕೊಂಡಿದ್ದರು. ಆದರೆ ಮೋದಿ ಗೆಲುವಿಗಾಗಿ ನಾನು ಈ ಬಾರಿ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಅದಲ್ಲದೆ ಕುಮಾರಸ್ವಾಮಿ ಜತೆ ಮಾತುಕತೆ ನಡೆಸಿ, ಬೆಂಬಲ ಸೂಚಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಮತಾ ಆಡಳಿತದಲ್ಲಿ ಭಯೋತ್ಪಾದಕರಿಗೆ ಸ್ವರ್ಗ ಹೇಳಿಕೆ: ಬಿಜೆಪಿ ವಿರುದ್ಧ ಬಂಗಾಳ ದೀದಿ ವಾಗ್ದಾಳಿ