Select Your Language

Notifications

webdunia
webdunia
webdunia
webdunia

10 ಸಾವಿರ ರೂ.ಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಬುಧವಾರ, 14 ಫೆಬ್ರವರಿ 2024 (14:29 IST)
ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ ವಿಧಿಸಿತ್ತು.

ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ದಂಡ ಹಾಕಿದ್ದು ಭಾರೀ ಸುದ್ದಿಯಾಗಿತ್ತು. ಇದೀಗ ಪ್ರಕರಣ ಸಂಬಂಧ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿದಂತೆ ಕೆಲವರಿಗೆ ದಂಡ ವಿಧಿಸಲಾಗಿತ್ತು. ಇದೀಗ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಿಎಂ ಸಿದ್ದು ಸುಪ್ರೀಂ ಮೊರೆಹೋಗಿದ್ದಾರೆ.

2022 ರಲ್ಲಿ ನಡೆದ ಪ್ರತಿಭಟನೆಯ ಪ್ರಕರಣ ಇದಾಗಿತ್ತು. ಅಂದು ಬಿಜೆಪಿ ಸರ್ಕಾರ ಆಡಳಿತವಿತ್ತು. ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ 10 ಸಾವಿರ ದಂಡದ ಜೊತೆಗೆ ಮಾರ್ಚ್ 6 ರಂದು ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರಾಗಲು ಸೂಚಿಸಿತ್ತು. ಜನಪ್ರತಿನಿಧಿಗಳು ನಿಯಮ ಪಾಲಿಸಿದರೆ ಜನರೂ ಪಾಲಿಸುತ್ತಾರೆ ಎಂದು ಕೋರ್ಟ್ ಛೀಮಾರಿ ಹಾಕಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಕ್ಷುಕನ ಯಡವಟ್ಟಿಗೆ ಬಂತು ಬಾಂಬ್ ಸ್ಕ್ವಾಡ್