ಆರತಿ ತಟ್ಟೆಗೆ ಹಣ ಹಾಕಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರು

ಶನಿವಾರ, 3 ನವೆಂಬರ್ 2018 (14:42 IST)
ಬಾಗಲಕೋಟೆ : ಇಂದು ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವನೆ ನಡೆಯುತ್ತಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರು  ನೀತಿ ಸಂಹಿತಿ ಉಲ್ಲಂಘನೆ‌ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇಂದು ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವನೆ ನಡೆಯುತ್ತಿರುವ ಹಿನ್ನಲೆಯಲ್ಲಿ ನಾಗನೂರ ಗ್ರಾಮದ ಮತಗಟ್ಟೆ ಸಂಖ್ಯೆ 97 ಹಾಗೂ 98ರಲ್ಲಿ ಮತದಾರರಿಗೆ ಆರತಿ ಬೆಳಗಿ ಸ್ವಾಗತ ಕೊರಲು ಮಾದರಿ ಮತಗಟ್ಟೆಯಲ್ಲಿ ಚುನಾವಣಾ ಆಯೋಗದಿನದಿಂದ ಕಾರ್ಯಕರ್ತೆಯರನ್ನು ನೇಮಕಗೊಳಿಸಲಾಗಿತ್ತು.


ಕಾರ್ಯಕರ್ತೆ ಆಶಾ ಎಂಬುವವರು ಆರತಿ ಬೆಳಗುವ ವೇಳೆ ಅಲ್ಲಿ ಭೇಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರು ಆರತಿ ತಟ್ಟೆಗೆ ಹಣ ಹಾಕಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ ಮಾಜಿ ಶಾಸಕ ಎಂ.ಪಿ. ರವೀಂದ್ರ ನಿಧನ