ಟಿಪ್ಪು ಜಯಂತ್ಯುತ್ಸವದಲ್ಲಿ ಮೆರವಣಿಗೆ ನಿಷೇಧವೆಂದ ಡಿಸಿಎಂ

ಮಂಗಳವಾರ, 6 ನವೆಂಬರ್ 2018 (14:10 IST)
ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಶಾಂತಿ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿರುವ ಡಿಸಿಎಂ, ಟಿಪ್ಪು ಜಯಂತಿ ಸಂದರ್ಭದಲ್ಲಿ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.

ಟಿಪ್ಪು ಜಯಂತ್ಯುತ್ಸವ ಆಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಕಳೆದ ಮೂರ್ನಾಲ್ಕು ವರ್ಷಗಳಿಂದ ಟಿಪ್ಪು ಜಯಂತ್ಯುತ್ಸವ ಆಚರಿಸಿಕೊಂಡು ಬಂದಿದೆ.

ಈ ವರ್ಷವೂ ಆಚರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ 247.91 ಕೋಟಿ ರೂ. ಕ್ರಿಯಾ ಯೋಜನೆಗೆ ಹೆಚ್.ಕೆ.ಆರ್.ಡಿ.ಬಿ. ಜಿಲ್ಲಾ ಸಲಹಾ ಸಮಿತಿ ಅನುಮೋದನೆ