ಕೆಸರಿನಲ್ಲಿ ಸಿಲುಕಿ ಸಾವು!

ಶುಕ್ರವಾರ, 13 ಜುಲೈ 2018 (15:58 IST)
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅಪಾರ ಹಾನಿಯಾಗುತ್ತಿರುವುದು ಮುಂದುವರೆದಿದೆ. ಜಾನುವಾರು, ಜನರು ಸಾವನ್ನಪ್ಪುತ್ತಿದ್ದಾರೆ. ಕೆಸರಿನಲ್ಲಿ ಸಿಲುಕಿ ಮಾನಸಿಕ ಅಸ್ವಸ್ಥ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರದ ಬಂಗಾರಪೇಟೆ ಪಟ್ಟಣದ ಹುಣಸನಹಳ್ಳಿ ರೈಲ್ವೇ ಅಂಡರ್ ಪಾಸ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಂಗಾರಪೇಟೆ ತಾಲ್ಲೂಕಿನ ನರಿನತ್ತ ಗ್ರಾಮದ ಗೌರಮ್ಮ (78) ಮೃತ ವೃದ್ದೆಯಾಗಿದ್ದಾರೆ.
ಕೆಸರಿನಲ್ಲಿ ಸಿಲುಕಿದ್ದ ವೃದ್ದೆಯನ್ನ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸೇರಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು
ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ ಪ್ರಧಾನಿ ನರೇಂದ್ರ ಮೋದಿ ಕಾರ್ಪೋರೇಟ್ ಮಗ ಎಂದವರಾರು?