Select Your Language

Notifications

webdunia
webdunia
webdunia
webdunia

ಡೆಂಗ್ಯೂ ಪ್ರಕರಣಗಳ ಮೇಲ್ವೀಚಾರಣೆಗೆ ತಂತ್ರಾಶ : ದಿನೇಶ್ ಗುಂಡೂರಾವ್

ಡೆಂಗ್ಯೂ ಪ್ರಕರಣಗಳ ಮೇಲ್ವೀಚಾರಣೆಗೆ ತಂತ್ರಾಶ : ದಿನೇಶ್ ಗುಂಡೂರಾವ್
ಬೆಂಗಳೂರು , ಶುಕ್ರವಾರ, 8 ಸೆಪ್ಟಂಬರ್ 2023 (08:22 IST)
ಬೆಂಗಳೂರು : ಸರ್ಕಾರಿ ಆರೋಗ್ಯ ಕ್ಷೇತ್ರವನ್ನ ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಮಾತನಾಡುತ್ತಿದ್ದರು. ಪ್ರಸ್ತುತ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಮ್ಮ ಕ್ಲಿನಿಕ್ ಗಳನ್ನು ಮಹಾನಗರ ಪಾಲಿಕೆ ನಿರ್ವಹಿಸುತ್ತಿದೆ. ಆದರೆ ಹಲವು ಆರೋಗ್ಯ ಸೇವೆಗಳನ್ನ ಒದಗಿಸಲು ಪಾಲಿಕೆಗೆ ಸಾಧ್ಯವಿಲ್ಲ.

ಹೀಗಾಗಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ವಿಭಾಗ ಅಥವಾ ಕಮಿಷನರೇಟ್ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣ ವಿಚಾರವಾಗಿ ಮುಂಜಾಗೃತೆ ವಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಡೆಂಗ್ಯೂ ಮೇಲ್ವಿಚಾರಣಾ ತಂತ್ರಾಂಶವನ್ನು ಅನಾವರಣಗೊಳಿಸುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯಕ್ಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕಳೆದ 2 ತಿಂಗಳಿಂದ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಮೇಣವಾಗಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣಕ್ಕೆ ತರಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹ ಲಕ್ಷ್ಮಿ ಯೋಜನೆ ನೊಂದಣಿ ಸ್ಥಗಿತ ಮಹಿಳೆಯರಿಗೆ ಶಾಕ್..!