Select Your Language

Notifications

webdunia
webdunia
webdunia
webdunia

ದೇವರಾಜೇಗೌಡರ ಆರೋಪ ಸತ್ಯಕ್ಕೆ ದೂರವಾದುದು: ಸಿಎಂ ಸಿದ್ದರಾಮಯ್ಯ

Siddaramaiah

Sampriya

ಬೆಂಗಳೂರು , ಮಂಗಳವಾರ, 7 ಮೇ 2024 (14:45 IST)
ಬೆಂಗಳೂರು: ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್  ಎಂದು ಬಿಜೆಪಿ  ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ದೇವರಾಜೇಗೌಡ ಅವರು, ಎಸ್‌ಐಟಿಯು ಸರ್ಕಾರ ನಿಯಂತ್ರಣದಲ್ಲಿದೆ ಎಂದು ಹೇಳಿದ್ದರು.

ಈ ಬಗ್ಗೆ ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.

ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್ ಎಂದು ಬಿಜೆಪಿ  ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ  ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ.
ಎಸ್ ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ.  ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್ ಐಟಿ ರಚಿಸಲಾಗಿದೆ.

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು.

ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ  ಬಿಜೆಪಿ
 ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

'ಮಹಾನಾಯಕ'ನನ್ನು ನಿಯಂತ್ರಿಸಿ, ಇಲ್ಲದಿದ್ದರೆ ನಿಮ್ಮ ವಿಡಿಯೋ ಹೊರಬರಬಹುದೆಂದು ಸಿಎಂಗೆ ಎಚ್ಚರಿಕೆ ನೀಡಿದ ಜಾರಕಿಹೊಳಿ