Webdunia - Bharat's app for daily news and videos

Install App

ಗೋವಾ ಕನ್ನಡಿಗರ ಮನೆ ತೆರವು ಬೇಡ ಎಂದು ಹೋರಾಟಕ್ಕಿಳಿದ ಸಂಘಟನೆಗಳು

Webdunia
ಮಂಗಳವಾರ, 14 ಆಗಸ್ಟ್ 2018 (15:00 IST)
ಗೋವಾ ರಾಜ್ಯದಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಭಟನೆಗೆ ಇಳಿದಿವೆ.

ಗೋವಾದಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು, ಗೋವಾ ಸರ್ಕಾರ ಹಾಗೂ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ಅಂಚೆ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಸ್ತೂರಿ ಜನಪರ ವೇದಿಕೆಯ ಕಾರ್ಯಕರ್ತರು, ಗೋವಾ ರಾಜ್ಯದ ಆಡಳಿತ ವ್ಯವಸ್ಥೆಗೆ ಧಿಕ್ಕಾರ ಕೂಗಿದರು. ಕಳೆದ 10 ವರ್ಷಗಳಿಂದ ಇದೇ ಗೋವಾದಲ್ಲಿ ಅಲ್ಲಿನ ಸರ್ಕಾರ ಕನ್ನಡಿಗರನ್ನ ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿತ್ತು. ಮೂರು ವರ್ಷದ ಹಿಂದೆ ಮರಿನಾ ಬೀಚ್‌ನಲ್ಲೂ ಕೂಡ ಕನ್ನಡಿಗರಿಗೆ ತೊಂದರೆ ಕೊಟ್ಟಿದ್ದರು. ಆದರೆ ಈಗ ರಾಷ್ಟ್ರೀಯ ಹಸಿರು ಪೀಠದ ಆದೇಶದ ಮೇರೆಗೆ ಸುಮಾರು 121 ಕನ್ನಡಿಗರ ಮನೆಗಳನ್ನ ತೆರವು ಮಾಡುವುದಕ್ಕೆ ಮುಂದಾಗಿದೆ. ಆದರೆ ಅಲ್ಲಿರುವ ಕನ್ನಡಿಗರ ಮನೆಗಳನ್ನ ತೆರವು ಮಾಡಿದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಗೋವಾ ಸರ್ಕಾರದ ವಿರುದ್ಧ ಉಗ್ರಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ಕೊಟ್ಟರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments