Select Your Language

Notifications

webdunia
webdunia
webdunia
webdunia

ದೇಶದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣ– ಎಸ್.ಆರ್.ಹಿರೇಮಠ

ದೇಶದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣ– ಎಸ್.ಆರ್.ಹಿರೇಮಠ
ರಾಯಚೂರು , ಭಾನುವಾರ, 10 ಡಿಸೆಂಬರ್ 2017 (22:12 IST)
ದೇಶದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆಯಿಂದ ತುರ್ತು ಪರಿಸ್ಥಿತಿ ನಿರ್ಮಾಣಗೊಂಡಿದೆ. ಸಂವಿಧಾನ ವಿರೋಧಿಯಾಗಿ ಆಡಳಿತ ಮಾಡುತ್ತಿವೆ ಎಂದು ಸಮಾಜ ಪರಿವರ್ತನಾ ಆಂದೋಲನದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ದೇಶದಲ್ಲಿನ ಕೃಷಿ ಬಿಕ್ಕಟ್ಟು, ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಬಗ್ಗೆ ಕ್ರಮ ಜರುಗಿಸಬೇಕಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಸರ್ಕಾರಗಳು ಒಬ್ಬರ ಮೇಲೊಬ್ಬರು ಆರೋಪಗಳು ಮಾಡುವ ಮೂಲಕ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿವೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಅಧಿಕಾರ ಪಡೆದು, ಅಕ್ರಮ ಗಣಿಗಾರಿಕೆ ನಡೆಸಿದವರನ್ನು ರಕ್ಷಣೆ ಮಾಡುತ್ತಿದ್ದಾರೆ. ಜನರ ದುಡ್ಡಿನಲ್ಲಿ ಸಾಧನೆಯಾತ್ರೆ ನಡೆಸುವ ಮೂಲಕ ರಾಜಕೀಯ ಪಕ್ಷದ ಯಾತ್ರೆಯನ್ನಾಗಿಸಿ ಪ್ರಚಾರ ಕೈಗೊಳ್ಳಲು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಶೋಭೆ ತರುವುದಿಲ್ಲ ಎಂದು ತಿಳಿಸಿದರು.
ಅಧಿಕಾರದಲ್ಲಿರುವವರು ಸ್ವಾರ್ಥ ಸಾಧನೆಗಾಗಿ ಹಾಗೂ ದುರಾಸೆ ಈಡೇರಿಸಿಕೊಳ್ಳಲು ಸಾರ್ವಜನಿಕ ಸ್ವತ್ತನ್ನು ಲೂಟಿ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸೇರಿದಂತೆ ಅನೇಕರು ವೈಯಕ್ತಿಕ ತೇಜೋವಧೆಯಲ್ಲಿ ತೊಡಗಿದ್ದಾರೆ. ಇದರಿಂದ ಯಾರಿಗೂ ಪ್ರಯೋಜನವಿಲ್ಲ. ಎರಡೂ ಪಕ್ಷಗಳು ಕೂಡ ಅನಗತ್ಯ ವಿಚಾರಗಳನ್ನು ಚರ್ಚೆಗೆ ಬಿಡುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿವೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುವ ಮೂಲಕ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಸಿಬಿ ಅವರಿಂದ ಯಶೋಮತಿ ವಿಚಾರಣೆ