Select Your Language

Notifications

webdunia
webdunia
webdunia
webdunia

ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ಆರೋಪ

ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ಆರೋಪ
ಚಾಮರಾಜನಗರ , ಶುಕ್ರವಾರ, 6 ಜುಲೈ 2018 (15:56 IST)
ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ಚಾಮರಾಜನಗರದಲ್ಲಿಂದು ರೈತ ಸಂಘದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ರು.
 
ಚಾಮರಾಜನಗರ - ನರಸೀಪುರ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು, ಇಂದು ದೇಮಹಳ್ಳಿ ಗ್ರಾಮದಲ್ಲಿ ರೈತ ಚಿಕ್ಕಸ್ವಾಮಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು.
 
ಬಜೆಟ್ ನಲ್ಲಿ ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಬಹುದು ಎಂಬ ನಿರೀಕ್ಷೆ ಹೊಂದಲಾಗಿತ್ತು. ಆದರೆ ಸೋಸೈಟಿ ಹೊರತು ಪಡಿಸಿ ಇತರೇ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡದಿರುವುದರಿಂದ ರೈತ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ರೈತರ ಎಲ್ಲಾ ಸಾಲ ಮನ್ನಾ ಮಾಡ್ಬೇಕು ಎಂದು ಆಗ್ರಹಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಜುಲೈ 8 ರಿಂದ 10 ರ ವರೆಗೆ ಭಾರಿ ಮಳೆ ಎಲ್ಲೆಲ್ಲಿ ಬೀಳುತ್ತೆ ಗೊತ್ತಾ?