Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ತಂಡದಿಂದ ಗಣಪತಿ ಫ್ಲ್ಯಾಟ್‌ಗೆ ಭೇಟಿ

ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ತಂಡದಿಂದ ಗಣಪತಿ ಫ್ಲ್ಯಾಟ್‌ಗೆ ಭೇಟಿ
ಮಂಗಳೂರು , ಸೋಮವಾರ, 8 ಆಗಸ್ಟ್ 2016 (12:48 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳ ತಂಡ ಗಣಪತಿ ಅವರ ಮಂಗಳೂರಿನ ಫ್ಲ್ಯಾಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಚೈನಲ್ಲಿನ ಪ್ರಾವಿಡೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಎಂ.ಕೆ.ಗಣಪತಿ ಅವರ ಫ್ಲ್ಯಾಟ್‌ಗೆ ಭೇಟಿ ನೀಡಿದ ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ತಂಡ ಪ್ರಕರಣದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸಿಐಡಿ ಅಧಿಕಾರಿಗಳು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ಕುರಿತಂತೆ ಗಣಪತಿ ಅವರ ಪತ್ನಿ ಪಾವನಾ ಅವರನ್ನು ಸಹ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
 
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಾ.ಜಿ.ಪರಮೇಶ್ವರ್