Select Your Language

Notifications

webdunia
webdunia
webdunia
webdunia

ಸರ್ಕಾರಿ ನೌಕರರು ಕಡ್ಡಾಯವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಿ

ಸರ್ಕಾರಿ ನೌಕರರು ಕಡ್ಡಾಯವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಿ
ಕಲಬುರಗಿ , ಗುರುವಾರ, 20 ಡಿಸೆಂಬರ್ 2018 (18:40 IST)
ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳಲ್ಲಿರುವ ಕ್ರೀಡಾಪಟುಗಳು ಕಡ್ಡಾಯವಾಗಿ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ  ಸೂಚಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆದ ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ರಾಚಪ್ಪ ಮಾತನಾಡಿ, ತಾಲೂಕು ಮಟ್ಟದ ಎಲ್ಲ ಸರ್ಕಾರಿ ಇಲಾಖೆಗಳಿಗೆ ಮುಂಚಿತವಾಗಿ ಕ್ರೀಡಾಕೂಟದ ದಿನಾಂಕ ಹಾಗೂ  ಮಾಹಿತಿ ನೀಡಬೇಕು. ಅವರು ಸ್ಪರ್ಧೆಗಳಿಗೆ  ಸಿದ್ಧತೆಮಾಡಿಕೊಳ್ಳಲು ಅನುಕೂಲವಾಗುವುದು ಎಂದರು.

ನೌಕರರ ಸಂಘದ ಸದಸ್ಯರು ಎಲ್ಲ ಇಲಾಖೆಗಳಲ್ಲಿದ್ದು, ಅವರು ತಮ್ಮ ಕಚೇರಿಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸುವವರ ಪಟ್ಟಿಯನ್ನು ಕ್ರೀಡಾ ಇಲಾಖೆಗೆ ಸಲ್ಲಿಸಬೇಕು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಕ್ರೀಡೆಗಳು ನಡೆಯಲಿದ್ದು, ಮಹಾನಗರ ಪಾಲಿಕೆಯಿಂದ ಕ್ರೀಡಾಂಗಣವನ್ನು ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಜೀವಾವಧಿ ಕಠಿಣ ಶಿಕ್ಷೆ, 1.50 ಲಕ್ಷ ದಂಡ