Select Your Language

Notifications

webdunia
webdunia
webdunia
webdunia

ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ಇಲ್ಲಿದೆ ನೋಡಿ..!

ರೇಷನ್ ಕಾರ್ಡ್

geetha

bangalore , ಗುರುವಾರ, 22 ಫೆಬ್ರವರಿ 2024 (21:09 IST)
ಬೆಂಗಳೂರು-ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ವಿವರಣೆ ಕುರಿತು ಸದನದಲ್ಲಿ ವಿಪಕ್ಷ ನಾಯಕ ಆ‌ರ್.ಅಶೋಕ್ ರವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಚ್.ಮುನಿಯಪ್ಪರವರು ಪ್ರಸ್ತುತ ಸದ್ಯಕ್ಕೆ ಸ್ಥಗಿತವಾಗಿರುವ ಬಿಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಪುನಃ 1 ಏಪ್ರಿಲ್ 2024 ರಿಂದ ಪ್ರಾರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ  ಸಚಿವ ಕೆ.ಎಚ್.ಮುನಿಯಪ್ಪ ಗುರುವಾರ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
 
ಬಹುತೇಕ ಕಳೆದ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗ್ಗೆಯ ಹೊಸ ರೇಷನ್ ಕಾರ್ಡಅನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರಲ್ಲಿಲ್ಲ ಈ ಬಗ್ಗೆ ಸಾರ್ವಜನಿಕರಲ್ಲಿ ತೀರ್ವ ಅಕ್ರೋಶ ವ್ಯಕ್ತವಾಗುತ್ತಿರುವ ಬಗ್ಗೆ ವಿಧಾನ ಸಭೆಯಲ್ಲಿ ವಿಪಕ್ಷ ನಾಯಕ ಆ‌ರ್.ಅಶೋಕ್ ಮತ್ತಿತರ ಸದಸ್ಯರು ಪ್ರಶ್ನೆ ಮಾಡಿದಾಗ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಉತ್ತರ ನೀಡಿದ್ದಾರೆ.
 
ಇನ್ನೂ  ಪಡಿತರ ಚೀಟಿ ಪಡೆಯಲು 2.95 ಲಕ್ಷ ಹೊಸ ಅರ್ಜಿಗಳು ಸಲ್ಲಿಕೆಯಾಗಿದ್ದು ಈ ಅರ್ಜಿಗಳ ಪರಿಶೀಲಿಸುವ ಕಾರ್ಯವು ಇಲಾಖೆ ಅಧಿಕಾರಿಗಳಿಂದ ಭರದಿಂದ ಸಾಗುತ್ತಿದ್ದು, ಈ ಪ್ರಕ್ರಿಯೆಯು 31 ಮಾರ್ಚ್ 2024ರ ಒಳಗಾಗಿ ಮುಗಿಯಲಿದ್ದು, ಇವುಗಳನ್ನು ವಿಲೇವಾರಿ ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಭಕ್ತರಿಗೆ ಮಾನಸಿಕ ನೆಮ್ಮದಿ ತರುವ ಸೀತಾರಾಮ ಆಧ್ಯಾತ್ಮಿಕ ಬ್ಯಾಂಕ್...!