Select Your Language

Notifications

webdunia
webdunia
webdunia
webdunia

ನೇಹಾ ಹತ್ಯೆ ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದ ಸಿಐಡಿ ತಂಡ

Neha Murder

Sampriya

ಧಾರವಾಡ , ಬುಧವಾರ, 24 ಏಪ್ರಿಲ್ 2024 (14:14 IST)
Photo Courtesy X
ಧಾರವಾಡ: ರಾಜ್ಯವನ್ನೇ ಬೆಚ್ಚಿಬೀಳಿಸಿದ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ನನ್ನು ಹೆಚ್ಚಿನ ತನಿಖೆಗಾಗಿ ಸಿಐಡಿ ವಶಕ್ಕೆ ಪಡೆದಿದೆ.

ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದ ಬೆನ್ನಲ್ಲೇ ಪೊಲೀಸರಿಂದ  ತನಿಖಾ ಕಡತಗಳನ್ನು ವಶಕ್ಕೆ ಪಡೆದಿರುವ ಸಿಐಡಿ ತಂಡ ತನಿಖೆ ಶುರು ಮಾಡಿದೆ. ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿದ್ದು,  ಸದ್ಯ ಆರೋಪಿ ಫಯಾಜ್ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದಾನೆ.

ತನಿಖೆ ಶುರು ಮಾಡಿದ ಸಿಐಡಿ ಅಧಿಕಾರಿಗಳು:  ಪ್ರಕರಣದ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಮತ್ತು ತನಿಖೆ ಕಡತ ಪಡೆದ ಸಿಐಡಿ ಅಧಿಕಾರಿಗಳು ಆರೋಪಿ ವಶಕ್ಕೆ ಪಡೆಯುತ್ತಿದ್ದಂತೆ ಹೆಚ್ಚಿನ ತನಿಖೆ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.

ತನಿಖೆ ಆರಂಭಿಸಿರುವ ಎಸ್‌ಪಿ ವೆಂಕಟೇಶ್ ನೇತೃತ್ವದ ತಂಡ ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

 ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ


Share this Story:

Follow Webdunia kannada

ಮುಂದಿನ ಸುದ್ದಿ

ಜನರ ಆಸ್ತಿಯಲ್ಲಿ ಅರ್ಧಪಾಲು ಸರ್ಕಾರಕ್ಕೆ: ಕಾಂಗ್ರೆಸ್ ಪ್ರಣಾಳಿಕೆಗೆ ಪ್ರಧಾನಿ ಮೋದಿ, ಅಮಿತ್ ಶಾ ವಾಗ್ದಾಳಿ