Select Your Language

Notifications

webdunia
webdunia
webdunia
webdunia

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಎಂದು ಗೊತ್ತಾ?

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಎಂದು ಗೊತ್ತಾ?
ಮಂಗಳೂರು , ಭಾನುವಾರ, 3 ಫೆಬ್ರವರಿ 2019 (21:18 IST)
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಉಸ್ತುವಾರಿ ಹೇಳಿದ್ದಾರೆ.

ಮೈತ್ರಿ ಸರಕಾರದ ಎರಡೂ ಪಕ್ಷಗಳ ಸಭೆ ನಡೆಸಲಾಗುತ್ತದೆ. ಫೆ.10 ರ ನಂತರ ಲೋಕಸಭೆ ಚುನಾವಣಾ ಅಭ್ಯರ್ಥಿಗಳ  ಆಯ್ಕೆ ಸಭೆ ನಡೆಯಲಿದೆ. ಹೀಗಂತ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಕೆ.ಸಿ.ವೇಣುಗೋಪಾಲ್ ಹೇಳಿಕೆ ನೀಡಿದ್ದು, ಶೀಘ್ರ ಎರಡು ಪಕ್ಷಗಳು ಸಭೆ ನಡೆಸಲಾಗುತ್ತದೆ. ಅದರಲ್ಲಿ ಲೋಕಸಭೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆಯಾಗಲಿದೆ. ಬಳಿಕ ಲೋಕಸಭೆ ಅಭ್ಯಾರ್ಥಿಗಳು ಯಾರು ಅಂತಾ ಗೊತ್ತಾಗುತ್ತದೆ ಎಂದು ಹೇಳಿದರು.   



Share this Story:

Follow Webdunia kannada

ಮುಂದಿನ ಸುದ್ದಿ

ಅಂಬೇಡ್ಕರ್ ಅನುಯಾಯಿ ಬಂಧನಕ್ಕೆ ಖಂಡನೆ