Select Your Language

Notifications

webdunia
webdunia
webdunia
webdunia

ಮಹದಾಯಿ ವಿವಾದ: ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ!

ಮಹದಾಯಿ ವಿವಾದ: ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ!
ನವದೆಹಲಿ , ಶುಕ್ರವಾರ, 19 ಆಗಸ್ಟ್ 2016 (12:48 IST)
ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ ಹಿನ್ನೆಡೆ ಹಿನ್ನೆಲೆಯಲ್ಲಿ ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಸಲಹೆಯಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ ಅನ್ಯಾಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆಸಲಾಗಿದೆ. ಈಗಾಗಲೇ ಕರಡು ಪ್ರತಿ ಸಿದ್ಧಪಡಿಸಲಾಗಿದೆ. ಯಾವ್ಯಾವ ಅಂಶಗಳ ಕುರಿತು ಮೇಲ್ಮನವಿ ಸಲ್ಲಿಸಬೇಕು ಎನ್ನುವ ಕುರಿತು ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಅವರ ಜೊತೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
 
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರಕಾರ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು. 
 
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಾರಿ ಹಿನ್ನೆಡೆಯಾಗಿತ್ತು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧ ಬಿಜೆಪಿ ಪ್ರತಿಭಟನೆ!