ಎಂಪಿ ಚುನಾವಣೆ: ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡ್ತೇನೆ ಎಂದ ಮಾಜಿ ಸಿಎಂ

ಮಂಗಳವಾರ, 28 ಆಗಸ್ಟ್ 2018 (14:06 IST)
ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಗೊಂಡಿದೆ. ಯಾವ ಪಕ್ಷಗಳೂ ಕೂಡ ಅಭ್ಯರ್ಥಿಗಳ ಹೆಸರನ್ನು ಪ್ರಕಟಗೊಳಿಸಿಲ್ಲ. ಆದರೂ ಇನ್ನೊಂದೆಡೆ ತಾವು ಮುಂಬರುವ ಚುನಾವಣೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹೇಳಿಕೆ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ  ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಗೊಂದವಿಲ್ಲ  ಎಂದು ಹೇಳಿರುವ ಅವರು, ಮಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾವು ಎರಡು ಬಾರಿ ಚಿಕ್ಕಬಳ್ಳಾಪುರ   ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಚಿಕ್ಕ ಬಳ್ಳಾಪುರದಿಂದ  ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸಮಿಶ್ರ ಸರಕಾರ ಅಧಿಕಾರಕ್ಕೆ ಬರುವಾಗ ಕೆಲವೊಂದು  ಒಪ್ಪಂದಗಳನ್ನು  ಮಾಡಲಾಗಿದೆ. ಅದಕ್ಕೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಬದ್ಧರಾಗಿದ್ದಾರೆ ಎಂದು ಹೇಳಿದರು. ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING