ಪಂಪ್ ಸೆಟ್ ಕಳ್ಳತನ: ಸಂಕಷ್ಟದಲ್ಲಿ ರೈತರು

ಭಾನುವಾರ, 9 ಸೆಪ್ಟಂಬರ್ 2018 (16:40 IST)
ಸುಮಾರು ಹತ್ತಕ್ಕೂ ಹೆಚ್ಚು ರೈತರ ಪಂಪ್ಸೆಟ್ ಗಳನ್ನು ಒಂದೇ ರಾತ್ರಿಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನಲ್ಲಿ ಬಲ್ಲೇನಹಳ್ಳಿ ಗ್ರಾಮದಲ್ಲಿ ರೈತರ ಪಂಪ್ ಸೆಟ್ ಗಳ ಕಳ್ಳತನ ಘಟನೆ ನಡೆದಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ರೈತರ ಪಂಪ್‌ಸೆಟ್ ಗಳು ಹಾಗೂ ಕೇಬಲ್‌ಗಳನ್ನು ಕಳ್ಳರು ಕಳವು ಮಾಡಿದ್ದಾರೆ.

ಇದರೊಂದಿಗೆ ಮತ್ತೆ ಸರಣಿ ಕಳ್ಳತನ ಪ್ರಕರಣ ತಲೆ ಎತ್ತಿದಂತಾಗಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಆಗಿಂದಾಗಲೇ ಕಳ್ಳತನ ಪ್ರಕರಣಗಳು ನಡೆಯುತ್ತಲೇ ಬರುತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇನ್ನೂ ಈ ಸಂಬಂಧ ಕೆ ಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ ವಧು ವ್ಯಾಟ್ಸಪ್ ನಲ್ಲೇ ಕಾಲ ಕಳೆಯುತ್ತಾಳೆಂದು ಮದುವೆಯನ್ನೇ ರದ್ದುಪಡಿಸಿದರು!