Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಚುನಾವಣೆ ಇಂದು: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪ್ರತಿಷ್ಠೆಯ ಪ್ರಶ್ನೆ

Election

Krishnaveni K

ಬೆಂಗಳೂರು , ಮಂಗಳವಾರ, 27 ಫೆಬ್ರವರಿ 2024 (09:22 IST)
ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ಸಭೆ ಚುನಾವಣೆ ಇಂದು ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್, ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಗೆ ಇದು ಪ್ರತಿಷ್ಠೆಯ ಕಣವಾಗಿದೆ. ಮೂರೂ ಪಕ್ಷಗಳಿಗೆ ಅಡ್ಡಮತದಾನದ ಭೀತಿ ಎದುರಾಗಿದ್ದು ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಲು ಶಕ್ತಿಮೀರಿ ಕಸರತ್ತು ನಡೆಸಿವೆ. ಕಣದಲ್ಲಿ ಒಟ್ಟು 5 ಅಭ್ಯರ್ಥಿಗಳಿದ್ದಾರೆ. ಒಬ್ಬ ಅಭ್ಯರ್ಥಿಗೆ 45 ಮತ ಬೇಕಾಗುತ್ತದೆ. ಕಾಂಗ್ರೆಸ್ ಬಳಿ 134 ಮತಗಳಿದ್ದು, ಬಿಜೆಪಿ ಬಳಿ 66, ಜೆಡಿಎಸ್ ಬಳಿ 19 ಮತಗಳಿವೆ. ಪಕ್ಷೇತರ ಮತಗಳು 2, ಕೆಆರ್ ಪಿಪಿ ಮತ ಮತ್ತು ರೈತ ಸಂಘದ ತಲಾ 1 ಮತಗಳಿವೆ.

ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ನಾಸಿರ್ ಹುಸೇನ್, ಜೆಸಿ ಚಂದ್ರಶೇಖರ್ ಕಣದಲ್ಲಿದ್ದಾರೆ. ಬಿಜೆಪಿಯಿಂದ ನಾರಾಯಣ್ ಸಾ.ಭಾಂಡಗೆ ಅಧಿಕೃತ ಅಭ್ಯರ್ಥಿಯಾಗಿದ್ದರೆ, ಬಿಜೆಪಿ, ಜಡಿಎಸ್ ನ ಜಂಟಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.  ವಿಧಾನಸಭೆಯ ಬಲಾಬಲದ ಪ್ರಕಾರ ಒಟ್ಟು ನಾಲ್ವರು ಅಭ್ಯರ್ಥಿಗಳಿಗೆ ಮಾತ್ರ ಗೆಲುವು ಸಾಧ‍್ಯ. ಆದರೆ ಇದೀಗ ಐವರು ರೇಸ್ ನಲ್ಲಿದ್ದು, ಮತದಾನ ಅನಿವಾರ್ಯವಾಗಿದೆ.

ಮೂರೂ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗೇ ಮತ ಹಾಕುವಂತೆ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಪಕ್ಷೇತರರು ಯಾರಿಗೆ ಬೆಂಬಲ ನೀಡುತ್ತಾರೆ ಎಂಬುದೂ ನಿರ್ಣಾಯಕವಾಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿಗೆ 6 ಮತಗಳು ಬೇಕಾಗಿದ್ದು, ಅದನ್ನು ಹೇಗೆ ಪಡೆಯುತ್ತಾರೆ ಎನ್ನುವುದು ಕುತೂಹಲಕಾರಿಯಾಗಿದೆ. ಇಂದು ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

41 ಸಾವಿರ ಕೋಟಿ ರೂ. ಯೋಜನೆಗೆ ಪಿಎಂ ಚಾಲನೆ