11ರ ಬಾಲಕಿ ಮೇಲೆ ರೇಪ್; ಅಪರಾಧಿಗೆ ಜೀವಾವಧಿ ಶಿಕ್ಷೆ

ಸೋಮವಾರ, 11 ಫೆಬ್ರವರಿ 2019 (17:19 IST)
ಅಪ್ರಾಪ್ತೆ ಬಾಲಕಿಯನ್ನು ಬಲವಂತವಾಗಿ ರೇಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

2012 ರಲ್ಲಿ ಎತ್ತುಗಳಿಗೆ ನೀರು ಕುಡಿಸಲು ನಾಲೆಗೆ ಕರೆದುಕೊಂಡು ಹೋಗಿ ಬರುವಾಗ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಗಡಿ ಲಿಂಗದಳ್ಳಿಯ ಹೊಲವೊಂದರಲ್ಲಿ ರಮೇಶ ತಂದೆ ಹಣಮಂತ ವಡ್ಡರ್ (22) ಈತನು 11 ವರ್ಷದ ಬಾಲಕಿಯ ಮೇಲೆ ರೇಪ್ ಮಾಡಿದ್ದನು. ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್. ಅವರು ಅಪರಾಧಿ ರಮೇಶ್ ಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

LOADING