Select Your Language

Notifications

webdunia
webdunia
webdunia
webdunia

ಹು-ಬೆಂ ಸೂಪರ್​ಫಾಸ್ಟ್ ರೈಲು ಸೇವೆ ಪುನಾರಂಭ

ಹು-ಬೆಂ ಸೂಪರ್​ಫಾಸ್ಟ್ ರೈಲು ಸೇವೆ ಪುನಾರಂಭ
bangalore , ಸೋಮವಾರ, 27 ನವೆಂಬರ್ 2023 (15:20 IST)
ಹುಬ್ಬಳ್ಳಿ - ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಶೇಷ ಸೂಪರ್​ಫಾಸ್ಟ್ ರೈಲು ಸೇವೆಯನ್ನು ಪುನಾರಂಭಿಸಲಾಗಿದೆ. ರೈಲ್ವೆ ಇಲಾಖೆ ಕಳೆದ ವಾರ ಈ ರೈಲು ಸೇವೆಯನ್ನು ರದ್ದು ಮಾಡಿತ್ತು. ರೈಲ್ವೆ ಇಲಾಖೆಯ ಈ ನಿರ್ಧಾರಕ್ಕೆ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ರೈಲು ಸೇವೆಯನ್ನು ಪುನಾರಂಭಿಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಅವರಿಗೆ ಸಾರ್ವಜನಿಕರು ಮತ್ತು ಹಲವು ಸಂಘಟನೆಗಳು ಮನವಿ ಮಾಡಿದ್ದವು. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ, ಹುಬ್ಬಳ್ಳಿ-ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ ಪುನರಾರಂಭವಾಗಿದೆ.

ಸ್ಥಗಿತಗೊಂಡಿದ್ದ ರೈಲು ಸೇವೆಯನ್ನು ಪುನರಾರಂಭ ಮಾಡುವ ಕುರಿತು ನಾನು ರಾಜಸ್ಥಾನದಿಂದ ಬಂದ ತಕ್ಷಣ ರೈಲ್ವೆ ಅಧಿಕಾರಿಗಳಿಗೆ ಪ್ರಸ್ತಾವಿಸಿದ್ದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

2024 ಜನವರಿಗೆ ಯುವನಿಧಿ: ಸಿದ್ದರಾಮಯ್ಯ