Select Your Language

Notifications

webdunia
webdunia
webdunia
webdunia

ಸೆಷನ್ಸ್ ಕೋರ್ಟ್ ಅಂಗಳಕ್ಕೆ ಸೆಲ್ವಾಡಿ ವಿಷ ಪ್ರಸಾದ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಸಾಧ್ಯತೆ....?

ಸೆಷನ್ಸ್ ಕೋರ್ಟ್ ಅಂಗಳಕ್ಕೆ ಸೆಲ್ವಾಡಿ ವಿಷ ಪ್ರಸಾದ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಸಾಧ್ಯತೆ....?
ಚಾಮರಾಜನಗರ , ಬುಧವಾರ, 16 ಜನವರಿ 2019 (14:59 IST)
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಪ್ರಕರಣದ  ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇವತ್ತಿಗೆ  ಮುಗಿಯಲಿದ್ದು, ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

ಕೊಳ್ಳೇಗಾಲದ ಜೆಎಂಎಫ್ ಸಿ ನ್ಯಾಯಾಲಯದಿಂದ ಸತ್ರ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಯಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಬೇಕೆಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಒಂದು ವೇಳೆ ಮನವಿ ಪುರಸ್ಕರಿಸಿದರೆ ಮೈಸೂರು ಕಾರಾಗೃಹದಿಂದಲೇ ವಿಷ ಪ್ರಸಾದ ಪ್ರಕರಣದ ಆರೋಪಿಗಳಾದ, ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಮತ್ತು ದೊಡ್ಡಯ್ಯ ವಿಚಾರಣೆಗೊಳಪಡಲಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿದ ಯದುವೀರ್