Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನಿಗೆ ತಕ್ಕ ಶಾಸ್ತಿ ಮಾಡಿದ ಸ್ಥಳೀಯರು

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನಿಗೆ ತಕ್ಕ ಶಾಸ್ತಿ ಮಾಡಿದ ಸ್ಥಳೀಯರು
ಚಿಕ್ಕಬಳ್ಳಾಪುರ , ಬುಧವಾರ, 21 ನವೆಂಬರ್ 2018 (07:01 IST)
ಚಿಕ್ಕಬಳ್ಳಾಪುರ : ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನೊರ್ವನನ್ನು ಸ್ಥಳೀಯರು ಸೇರಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ.


ಬಂಕೇನಹಳ್ಳಿ ಗ್ರಾಮದ ನಿವಾಸಿ ಗಂಗಾಧರಪ್ಪ (70) ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧ ಎಂಬುದಾಗಿ ತಿಳಿದುಬಂದಿದ್ದು, ಈತ 3 ನೇ ತರಗತಿಯ ಬಾಲಕಿಗೆ ಹಣ ಹಾಗೂ ತಿಂಡಿ ಆಸೆ ತೋರಿಸಿ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ನೋಡಿದ ಸ್ಥಳೀಯರು ವೃದ್ಧ ಗಂಗಾಧರಪ್ಪನನ್ನು ಹಿಡಿದು ಥಳಿಸಿದ್ದಾರೆ.


ನಂತರ ವೃದ್ಧ ಗಂಗಾಧರಪ್ಪ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕಿಯ ಪೋಷಕರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದು ವಿಡಿಯೋ ಮಾಡಿದ ಕಾಮುಕರು