Select Your Language

Notifications

webdunia
webdunia
webdunia
webdunia

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಈಶ್ವರಪ್ಪ ಮನವೊಲಿಕೆಗೆ ಕಮಲ ನಾಯಕರ ಸರ್ಕಸ್

K.S.Eshwarappa

Sampriya

ಶಿವಮೊಗ್ಗ , ಭಾನುವಾರ, 17 ಮಾರ್ಚ್ 2024 (14:17 IST)
Photo Courtesy Facebook
ಶಿವಮೊಗ್ಗ: ಲೋಕಸಭಾ ಚುನಾವಣೆಗೆ   ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ನಂತರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ  ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 
 
ಇದೀಗ ಈಶ್ವರಪ್ಪ ಅವರ ನಡೆ ಬಿಜೆಪಿಗೆ ದೊಡ್ಡ ತಲೆನೋವಾಗಿದ್ದು, ಸಂಧಾನಕ್ಕೆ ಬಿಜೆಪಿ ನಾಯಕರು ಈಶ್ವರಪ್ಪ ಮನೆಗೆ ತೆರಳುತ್ತಿದ್ದಾರೆ.
 
ಈಶ್ವರಪ್ಪ ಮನವೊಲಿಸುವ ಸಲುವಾಗಿ ಇಂದು ಬಿಜೆಪಿ ಮುಖಂಡರು ಮನೆಗೆ ಭೇಟಿ ನೀಡುತ್ತಿದ್ದಾರೆ. ಭಾನುವಾರ ಬೆಳಗ್ಗೆಯಿಂದಲೇ ಕೆ.ಎಸ್.ಈಶ್ವರಪ್ಪ ಮನೆಗೆ ಬಿಜೆಪಿ ನಾಯಕರು ಬರುತ್ತಿದ್ದು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಬಂದು ಈಶ್ವರಪ್ಪ ‌ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಸಂಧಾನಕ್ಕೆ ಈಶ್ವರಪ್ಪ ಮಣಿಯದ ಹಿನ್ನೆಲೆಯಲ್ಲಿ ವಾಪಸ್ ಮರಳಿದರು.
 
ಮಧ್ಯಾಹ್ನ ಬಿಜೆಪಿ ಹೈಕಮಾಂಡ್ ಪರವಾಗಿ ಈಶ್ವರಪ್ಪ ಮನೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಹಾಗೂ ರಾಜೇಶ್ ಬಂದಿದ್ದು, ಈಶ್ವರಪ್ಪ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ.
 
ನಾಳೆ ಪ್ರಧಾನಿ ಕರ್ನಾಟಕಕ್ಕೆ ಆಗಮನ: ಆದ್ದರಿಂದ ಈಶ್ವರಪ್ಪ ಅವರ ಮನವೊಲಿಕೆ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಆದರೆ ಈಶ್ವರಪ್ಪ ಅವರು ಯಾವುದಕ್ಕೂ ಬಗ್ಗದೆ, ಸ್ಪರ್ಧೆ ಮಾಡಿಯೇ ಸಿದ್ಧ ಎಂದು ಎನ್ನುತ್ತಿದ್ದಾರೆ.
 
ಈಶ್ವರಪ್ಪ ಶನಿವಾರ ಸಾಗರ ಬಳಿಯ ವರದಾಪುರದ ಶ್ರೀಧರ ಆಶ್ರಮಕ್ಕೆ ಭೇಟಿ ನೀಡಿದ ನಂತರ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಚ್ 22ರಿಂದ ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಶುಭ ಮುನ್ಸೂಚನೆ