Select Your Language

Notifications

webdunia
webdunia
webdunia
webdunia

ಕೆ-ಸೆಟ್, ಯು.ಜಿ.ಸಿ.-ನೆಟ್ ಪರೀಕ್ಷೆಗಳಿಗೆ ತರಬೇತಿ

ಕೆ-ಸೆಟ್, ಯು.ಜಿ.ಸಿ.-ನೆಟ್ ಪರೀಕ್ಷೆಗಳಿಗೆ ತರಬೇತಿ
ಕಲಬುರಗಿ , ಸೋಮವಾರ, 19 ನವೆಂಬರ್ 2018 (17:56 IST)
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ರಾಜ್ಯ ಮಟ್ಟದ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಗಳಿಗಾಗಿ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ಕೆ-ಸೆಟ್ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ಡಿಸೆಂಬರ್ ಕೊನೆಯ ವಾರದಲ್ಲಿ ನಡೆಸಲಿರುವ ಕಾಲೇಜು ಉಪನ್ಯಾಸಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ ಯು.ಜಿ.ಸಿ.-ನೆಟ್ ಹಾಗೂ ಹಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ (ಜೆ.ಆರ್.ಎಫ್.) ಪರೀಕ್ಷೆಗಳಿಗಾಗಿ 30 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು, ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 0821-2515944/ 9964760090ಗೆ ಸಂಪರ್ಕಿಸಬೇಕೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿ ಪ್ರಾದೇಶಿಕ ನಿರ್ದೇಶಕ ಡಾ. ಸಂಗಮೇಶ ಹಿರೇಮಠ ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟಿಸಿದ ಬಿಜೆಪಿ