Select Your Language

Notifications

webdunia
webdunia
webdunia
webdunia

ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ

cm siddaramaiah

Sampriya

ಬೆಂಗಳೂರು , ಶನಿವಾರ, 27 ಏಪ್ರಿಲ್ 2024 (16:49 IST)
Photo Courtesy X
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೊದಲ ಹಂತದ 14 ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂಬ ವರದಿಯಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು,  ಮೊದಲ ಹಂತದ ಚುನಾವಣೆ ಮುಗಿದಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಜನರು ಆಶೀರ್ವಾದ ಮಾಡಿದ್ದಾರೆಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಕೇಂದ್ರ @BJP4India  ಸರ್ಕಾರದ 10 ವರ್ಷಗಳ ವೈಫಲ್ಯ ಹಾಗೂ ನಮ್ಮ ಸರ್ಕಾರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪ ಮಾಡುತ್ತಿದ್ದೇವೆ. ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹವನ್ನು ತೋರುತ್ತಿದ್ದಾರೆ.  ‌‌

ಕರ್ನಾಟಕದಲ್ಲಿ ಮುಸ್ಲಿಂಮರಿಗೆ ಮೀಸಲಾತಿ ಕೊಟ್ಟಿದ್ದು ನಾನೇ ಎಂದು ಹೇಳಿಕೊಳ್ಳುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ತಮ್ಮ ಆಪ್ತಮಿತ್ರನಾಗಿರುವ ಪ್ರಧಾನಿ @narendramodi
 ಅವರ ಮುಸ್ಲಿಂ ಮೀಸಲಾತಿ ವಿರೋಧಿ ಹೇಳಿಕೆಗಳಿಗೆ ಏನೆನ್ನುತ್ತಾರೆ?

Share this Story:

Follow Webdunia kannada

ಮುಂದಿನ ಸುದ್ದಿ

ಅಮೇರಿಕಾದಲ್ಲಿ ಭೀಕರ ಅಪಘಾತ: ಗುಜರಾತ್‌ನ ಮೂವರು ಮಹಿಳೆಯರು ದುರ್ಮರಣ