Select Your Language

Notifications

webdunia
webdunia
webdunia
webdunia

ನಟ ಪುನೀತ್ ರಾಜ್ ಕುಮಾರ್ 'ಕಿಂಗ್ ಆಫ್ ಸ್ಯಾಂಡಲ್ ವುಡ್’ ಎಂದಿದ್ದು ಯಾರು ಗೊತ್ತಾ?

ನಟ  ಪುನೀತ್ ರಾಜ್ ಕುಮಾರ್ 'ಕಿಂಗ್ ಆಫ್ ಸ್ಯಾಂಡಲ್ ವುಡ್’ ಎಂದಿದ್ದು ಯಾರು ಗೊತ್ತಾ?
ಬೆಂಗಳೂರು , ಭಾನುವಾರ, 19 ಆಗಸ್ಟ್ 2018 (11:58 IST)
ಬೆಂಗಳೂರು : ಉಡುಪಿ ಹಾಗೂ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.


'ಸಂಪರ್ಕ್ ಫಾರ್ ಸಮರ್ಥನ್' ಅಭಿಯಾನದ ವಿಚಾರವಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಪುನೀತ್ ಅವರನ್ನು ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ನೇತೃತ್ವದ ಸರ್ಕಾರ ಏನೇನು ಕೆಲಸ ಮಾಡಿದೆ, ಎಷ್ಟರ ಮಟ್ಟಿಗೆ ಅಭಿವೃದ್ದಿ ಮಾಡಿದೆ ಎಂಬ ಸಾಧನೆಯ ಪುಸ್ತಕವನ್ನು ಅವರಿಗೆ ನೀಡಿದ್ದಾರೆ.


ಈ ವಿಚಾರವನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, 'ಅಪ್ಪನಂತೆ ಮಗ…' 'ಸಂಪರ್ಕ್ ಫಾರ್ ಸಮರ್ಥನ್' ವಿಷಯಕ್ಕಾಗಿ ಇಂದು 'ಕಿಂಗ್ ಆಫ್ ಸ್ಯಾಂಡಲ್ ವುಡ್ 'ಹಾಗೂ ಒಬ್ಬ ಒಳ್ಳೆಯ ವ್ಯಕ್ತಿ ಪುನೀತ್ ರಾಜ್ ಕುಮಾರ್ ರನ್ನು ಭೇಟಿ ಮಾಡಿದೆ. ಅವರ ಜೊತೆಗೆ ಪ್ರಧಾನಿ ಮೋದಿ ಅವರ ಸಾಧನೆಗಳ ಬಗ್ಗೆ ಚರ್ಚೆ ಮಾಡಿದೆ.' ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗಂಡನಿಗೆ ತಲಾಖ್ ಕೊಟ್ಟು ಅಳಿಯನೊಂದಿಗೆ ಓಡಿ ಹೋದಳು!