Select Your Language

Notifications

webdunia
webdunia
webdunia
webdunia

ಬಿಜೆಪಿಗೂ ಕರಾವಳಿಗೂ ಅವಿನಾಭಾವ ನಂಟು: ಮಂಗಳೂರು ರೋಡ್‌ ಶೋ ಬಣ್ಣಿಸಿದ ಮೋದಿ

ಬಿಜೆಪಿಗೂ ಕರಾವಳಿಗೂ ಅವಿನಾಭಾವ ನಂಟು: ಮಂಗಳೂರು ರೋಡ್‌ ಶೋ ಬಣ್ಣಿಸಿದ ಮೋದಿ

Sampriya

ನವದೆಹಲಿ , ಸೋಮವಾರ, 15 ಏಪ್ರಿಲ್ 2024 (18:27 IST)
Photo Courtesy X
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು,  ಮಂಗಳೂರಿನಲ್ಲಿ ನಡೆಸಿದ ರೋಡ್‌  ಸ್ಮರಣೀಯವಾಗಿತ್ತು ಮತ್ತು ಮೈಸೂರಿನಲ್ಲಿ ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದು  ಸಾರ್ವಜನಿಕ ಸಭೆ 'ಅಭೂತಸಪೂರ್ವ' ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಮಂಗಳೂರಿನ ರೋಡ್‌ ಶೋ ಸ್ಮರಣೀಯವಾಗಿತ್ತು ಎಂದು ಇಂದು ಎಕ್ಸ್‌ನಲ್ಲಿ ಪ್ರಧಾನಿ ಪೋಸ್ಟ್‌ ಮಾಡಿದ್ದಾರೆ. ರವಿವಾರ ಅವರು ನಗರದ ನಾರಾಯಣ ಗುರು ವೃತ್ತದಿಂದ ನವಭಾರತ ವೃತ್ತದ ತನಕ ರೋಡ್‌ ಶೋ ನಡೆಸಿದ್ದರು.

ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ.

ನಾವು ಇಂದು ಬಿಡುಗಡೆ ಮಾಡಿದ ಸಂಕಲ್ಪ ಪತ್ರದಲ್ಲಿ ಮಂಗಳೂರು ಅಭಿವೃದ್ಧಿಗಾಗಿ  ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. ವಿಶೇಷವಾಗಿ ನಗರಾಭಿವೃದ್ಧಿ ಮೂಲಕ 'ಸುಗಮ ಜೀವನ'ಕ ಲ್ಪಿಸುವುದು ಮತ್ತು ಇತರೆ ಕೆಲಸಗಳನ್ನು ಮಾಡುತ್ತೇವೆ. ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ.

ನಮ್ಮ ಮೂರನೇ ಅವಧಿಯಲ್ಲಿ ಭವಿಷ್ಯದ ಶಿಕ್ಷಣಕ್ಕೆ ಸಂಬಂಧಿಸಿದ ಅಂಶಗಳನ್ನು ಸುಧಾರಿಸುವಲ್ಲಿ ಮತ್ತು ಈ ಪ್ರದೇಶದಲ್ಲಿ ಇನ್ನೂ ಉತ್ತಮವಾದ ರೀತಿಯಲ್ಲಿ ಆರೋಗ್ಯ ವಲಯದ ರಕ್ಷಣೆಗೆ ಇನ್ನೂ ಹೆಚ್ಚಿನ ಕೆಲಸ ಮಾಡಬೇಕಾಗಿದೆ. ನಾವು ನೀಲಿ ಕ್ರಾಂತಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದು, ಇದರಿಂದ ಮೀನುಗಾರರಿಗೆ ಉತ್ತೇಜನ ಸಿಗಲಿದೆ.  ಇದೇ ರೀತಿ ನಾವು

ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ  ಮಂಗಳೂರು ಮತ್ತು ದಕ್ಷಿಣ ಕನ್ನಡ  ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು.  ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ  ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ  ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ.

'ಕರ್ನಾಟಕದಾದ್ಯಂತ ಬಿಜೆಪಿ ಮತ್ತು ಜೆಡಿಎಸ್‌ಗೆ ಇರುವ ಬೆಂಬಲ ಅತ್ಯುತ್ತಮವಾಗಿದೆ, ಜನರು ಕಾಂಗ್ರೆಸ್‌ನಿಂದ ಬೇಸತ್ತಿದ್ದಾರೆ ಮತ್ತು ನಮ್ಮ ಮೈತ್ರಿಕೂಟ ಗೆಲ್ಲಬೇಕೆಂದು ಬಯಸುತ್ತಿದ್ದಾರೆ, ನಮ್ಮ ಮಾಜಿ ಪ್ರಧಾನಿ ರ್ಯಾಲಿಗೆ ಆಗಮಿಸಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದು ನನಗೆ ಬಹಳ ವಿಶೇಷವಾಗಿದೆ' ಎಂದು ಪ್ರಧಾನಿ ಹೇಳಿದ್ದಾರೆ.

ದೇವೇಗೌಡ ಕೂಡ ಇಂದು ಪೋಸ್ಟ್‌ ಮಾಡಿ, ಮೈಸೂರಿನಲ್ಲಿ ನಡೆದ ಎನ್‌ಡಿಎ ರ್ಯಾಲಿ ಭಾರೀ ಯಶಸ್ವಿಯಾಗಿದೆ ಎಂದಿದ್ದಾರೆ. 'ಪ್ರಧಾನಿಯೊಂದಿಗೆ ಮಾತನಾಡಿ ಖುಷಿಯಾಯಿತು. ರಾಜ್ಯದಲ್ಲಿ ಮೈತ್ರಿಕೂಟಕ್ಕೆ 28 ಸ್ಥಾನಗಳನ್ನು ಗಳಿಸಲು ಹಾಗೂ ದೇಶದಲ್ಲಿ 400 ಸ್ಥಾನಗಳನ್ನು ತಲುಪಲು ಕೊಡುಗೆ ನೀಡಲು ಶ್ರಮಿಸುತ್ತೇವೆ' ಎಂದು ಅವರು ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಕೆ ಶಿವಕುಮಾರ್ ತಿರುಗೇಟು