Select Your Language

Notifications

webdunia
webdunia
webdunia
webdunia

ಕ್ರೀಡಾಧಿಕಾರಿಯೆಂದು ಪೋಸ್ ನೀಡಿ ಯುವತಿಯ ಮೇಲೆ ಅತ್ಯಾಚಾರ

ಕ್ರೀಡಾಧಿಕಾರಿಯೆಂದು ಪೋಸ್ ನೀಡಿ ಯುವತಿಯ ಮೇಲೆ ಅತ್ಯಾಚಾರ
ನವದೆಹಲಿ , ಮಂಗಳವಾರ, 18 ಜುಲೈ 2017 (17:00 IST)
ಉತ್ತರ ದೆಹಲಿಯ ಛತ್ರಾಸಲ್ ಕ್ರೀಡಾಂಗಣದ ಅಧಿಕಾರಿ ಎಂದು ಪೋಸ್ ನೀಡಿದ ಆರೋಪಿ, 16 ವರ್ಷದ ಕಿರಿಯ ಕಬಡ್ಡಿ ಆಟಗಾರಳ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
 
ಅತ್ಯಾಚಾರಕ್ಕೊಳಗಾದ ಹದಿಹರೆಯದ ಯುವತಿ ಸೋಮುವಾರದಂದು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ರೇಪ್ ಪ್ರಕರಣ ದಾಖಲಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ.
 
ಆರೋಪಿ ತನ್ನನ್ನು ತಾನು ಕ್ರೀಡಾಂಗಣದ ಅಧಿಕಾರಿಯೆಂದು ಪರಿಚಯಿಸಿಕೊಂಡು ಹದಿಹರೆಯದ ಕ್ರೀಡಾಪಟುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಘಟನೆಯ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.   
 
ಅತ್ಯಾಚಾರ ಧೃಡಿಕರಣಕ್ಕಾಗಿ ಹದಿಹರೆಯದ ಯುವತಿಯನ್ನು ಲೋಕ್ ನಾಯಕ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
 
ವೈದ್ಯಕೀಯ ಪರೀಕ್ಷೆಗಳ ನಂತರ, ಈ ಪ್ರಕರಣವನ್ನು ಪೋಸ್ಕೋ ಕಾಯ್ದೆಯಡಿಯಲ್ಲಿ (ಲೈಂಗಿಕ ಅಪರಾಧಗಳ ಕಾಯ್ದೆಯಿಂದ ಮಕ್ಕಳ ರಕ್ಷಣೆ) ದಾಖಲಾಗಿವೆ. ಆರೋಪಿಯ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಧ್ವಜ: ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ ಸರಕಾರ