Select Your Language

Notifications

webdunia
webdunia
webdunia
webdunia

ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ: ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ: ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

Sampriya

ನವದೆಹಲಿ , ಬುಧವಾರ, 10 ಏಪ್ರಿಲ್ 2024 (15:15 IST)
ನವದೆಹಲಿ:  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ದೆಹಲಿಯ ಎಎಪಿ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ, ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್‌ವೀರ್ ಸಿಂಗ್ ಬಿಧೂರ್, ಕಪಿಲ್ ಮಿಶ್ರಾ ಮತ್ತು ಶಾಜಿಯಾ ಇಲ್ಮಿ ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಜೈಲಿನ ಪ್ರೋಟೋಕಾಲ್‌ಗಳು ಅದಕ್ಕೆ ಅವಕಾಶ ನೀಡದ ಕಾರಣ ಸರ್ಕಾರವನ್ನು ಜೈಲಿನಿಂದ ನಡೆಸಲಾಗುವುದಿಲ್ಲ ಎಂದು ರಾಮ್‌ವೀರ್ ಸಿಂಗ್ ಬಿಧುರಿ ಹೇಳಿರು.

ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಸಲ್ಲಿಸಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ ಒಂದು ದಿನದ ನಂತರ ಪ್ರತಿಭಟನೆ ನಡೆದಿದೆ.

ಬುಧವಾರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ವಕೀಲರೊಂದಿಗಿನ ಕಾನೂನು ಸಭೆಗಳ ಸಂಖ್ಯೆಯನ್ನು ವಾರಕ್ಕೆ ಎರಡರಿಂದ ಐದು ಬಾರಿ ಹೆಚ್ಚಿಸುವಂತೆ ನಿರ್ದೇಶನ ಕೋರಿ ಸಲ್ಲಿಸಿದ ಮನವಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

ಕೇಜ್ರಿವಾಲ್ ಅವರು ವಿವಿಧ ರಾಜ್ಯಗಳಲ್ಲಿ ಅನೇಕ ಎಫ್‌ಐಆರ್‌ಗಳನ್ನು ಎದುರಿಸುತ್ತಿರುವುದರಿಂದ ಸಾಕಷ್ಟು ಕಾನೂನು ಕೆಲಸಗಳು ನಡೆಯುತ್ತಿವೆ ಮತ್ತು ಆದ್ದರಿಂದ ಸಭೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಕೇಜ್ರಿವಾಲ್ ಮನವಿಯ ಮೂಲಕ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಂತೆ ಧರ್ಮದ ರಾಜಕಾರಣ ನಾವು ಮಾಡಲ್ಲ: ಸಚಿವ ದಿನೇಶ್ ಗುಂಡೂರಾವ್