Select Your Language

Notifications

webdunia
webdunia
webdunia
webdunia

ಕೇಂದ್ರ ಸರಕಾರದ ವಿರುದ್ದ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ

ಕೇಂದ್ರ ಸರಕಾರದ ವಿರುದ್ದ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ
ಕೋಲ್ಕತ್ತಾ , ಸೋಮವಾರ, 4 ಫೆಬ್ರವರಿ 2019 (11:36 IST)
ಕೋಲ್ಕತ್ತಾ : ಕಮಿಷನರ್‌ ವಿಚಾರಣೆಗೆ ಬಂದ  ಸಿಬಿಐ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ್ದಾರೆ.


ಚಿಟ್‌ ಫಂಡ್‌ ಹಗರಣದಲ್ಲಿ ಕೋಲ್ಕತ್ತ ನಗರ ಪೊಲೀಸ್‌ ಕಮಿಷನರ್‌ ರಾಜೀವ್‌ ಕುಮಾರ್‌ ಅವರ ವಿಚಾರಣೆಗೆಂದು ಭಾನುವಾರ ಅವರ ನಿವಾಸಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನೇ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ.


ಪೊಲೀಸರು ಮತ್ತು ಇತರ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಸಿಬಿಐಯನ್ನು ಬಳಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ನಿನ್ನೇ ರಾತ್ರಿಯಿಡಿ ಧರಣಿ ನಡೆಸಿದ್ದಾರೆ. ಇಂದೂ ಕೂಡ ಅವರು ಇಡೀ ದಿನ ಧರಣಿ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಅಲ್ಲದೇ ಪೊಲೀಸ್ ಆಯುಕ್ತ ರಾಜೀವ್‌ಕುಮಾರ್ ಅವರನ್ನು ವಿಚಾರಣೆ ನಡೆಸಲು ಸಿಎಂ ಮಮತಾ ಬ್ಯಾನರ್ಜಿ ಸಹ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಅವರ ನಡೆಯನ್ನು ಪ್ರಶ್ನಿಸಿ ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಲ್ಲ ಎಂದ ಬಿಜೆಪಿಗೆ ಸವಾಲೆಸೆದ ಶಾಸಕ ಮುನಿರತ್ನ